Latest

*ಭೀಕರ ಸರಣಿ ಅಪಘಾತ; ಒಂದೇ ಕುಟುಂಬದ ಐವರ ದುರ್ಮರಣ*

ಪ್ರಗತಿವಾಹಿನಿ ಸುದ್ದಿ; ಚೆನ್ನೈ: ಭೀಕರ ಸರಣಿ ಅಪಘಾತದಲ್ಲಿ ಒಂದೇ ಕುಟುಂಬದ ಐವರು ಸಾವನ್ನಪ್ಪಿರುವ ಘಟನೆ ತಮಿಳುನಾಡಿನ ಕಡಲೂರು ಜಿಲ್ಲೆಯ ತಿರುಚ್ಚಿ-ಚೆನ್ನೈ ರಾಷ್ಟ್ರೀಯ ಹೆದ್ದಾರಿಯಲ್ಲಿ ನಡೆದಿದೆ.

ಬಾರಿ 6 ವಾಹನಗಳು ಅಪಘಾತಕ್ಕೀಡಾಗಿವೆ. ಎರಡು ಖಾಸಗಿ ಬಸ್ ಗಳು, 2 ಲಾರಿಗಳು, ಹಾಗೂ 2 ಕಾರುಗಳ ನಡುವೆ ಅಪಘಾತ ಸಂಭವಿಸಿದ್ದು, ಕಾರಿನಲ್ಲಿದ್ದ ಒಂದೇ ಕುಟುಂಬದ ಐವರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ.

ವೆಪ್ಪೂರ ಅಗ್ನಿಶಾಮಕ ಸಿಬ್ಬಂದಿ ನೆರವಿನಿಂದ ಕಾರಿನಲ್ಲಿ ಸಿಲುಕಿದ್ದ ಮೃತದೇಹಗಳನ್ನು ಹೊರತೆಗೆಯಲಾಗಿದೆ. ಮೃತರೆಲ್ಲರೂ ಚೆನ್ನೈನ ನಂಗನಲ್ಲೂರ್ ನವರಿರಬಹುದು ಎಂದು ಶಂಕಿಸಲಾಗಿದೆ. ಅಪಘಾತದ ಭೀಕರತೆಗೆ ವಾಹನಗಳು ಸಂಪೂರ್ಣ ನುಜ್ಜುಗುಜ್ಜಾಗಿವೆ.

*ಕಾರು ಡಿಕ್ಕಿ ಹೊಡೆಸಿ ದಂಪತಿಯ ಕೊಲೆಗೆ ಯತ್ನ; ಮಹಿಳೆ ಸಾವು*

https://pragati.taskdun.com/mandyamurdercar-accidentland-issue/

ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ

Related Articles

Back to top button