ಪ್ರಗತಿವಾಹಿನಿ ಸುದ್ದಿ; ಲಖನೌ: ಉತ್ತರ ಪ್ರದೇಶದಲ್ಲಿ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಕಾಶಿ ಯಾತ್ರೆಗೆ ತೆರಳಿದ್ದ ಕರ್ನಾಟಕದ ಬೀದರ್ ಜಿಲ್ಲೆಯ ಒಂದೇ ಕುಟುಂಬದ 7 ಜನರು ಮೃತಪಟ್ಟಿರುವ ಘಟನೆ ನಡೆದಿದೆ.
ಕಾಶಿಯಿಂದ ಅಯೋಧ್ಯೆಗೆ ಇಂದು ಮುಂಜಾನೆ 7 ಗಂಟೆಗೆ ಟೆಂಪೋ ಟ್ರಾವಲರ್ ನಲ್ಲಿ ತೆರಳುತ್ತಿದ್ದರು. ಈ ವೇಳೆ ಉತ್ತರ ಪ್ರದೇಶದ ಲಖೀಂಪುರ ಕೇರಿ ಬಳಿಯ ಹೆದ್ದಾರಿಯಲ್ಲಿ ಟೆಂಪೋ ಹಾಗೂ ಲಾರಿ ನಡುವೆ ಭೀಕರ ಅಪಘಾತ ಸಂಭವಿಸಿದ್ದು, ಸ್ಥಳದಲ್ಲೇ ರಾಜ್ಯದ ಒಂದೇ ಕುಟುಂಬದ 7 ಜನರು ಸಾವನ್ನಪ್ಪಿದ್ದಾರೆ. 9 ಜನರು ಗಂಭೀರವಾಗಿ ಗಾಯಗೊಂಡಿದ್ದಾರೆ.
ಗಾಯಾಳುಗಳನ್ನು ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಮೃತಪಟ್ಟ 7 ಯಾತ್ರಿಕರು ಬೀದರ್ ಜಿಲ್ಲೆಯ ಗುಂಪಾ ಕಾಲೋನಿಯವರು ಎಂದು ತಿಳಿದುಬಂದಿದೆ.
22 ಪ್ರಯಾಣಿಕರಿದ್ದ ವಿಮಾನ ನಾಪತ್ತೆ
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ