
ಪ್ರಗತಿವಾಹಿನಿ ಸುದ್ದಿ; ಜೈಪುರ: ತೀರ್ಥಯಾತ್ರೆ ಮುಗಿಸಿ ವಾಪಸ್ಸಾಗುತ್ತಿದ್ದ ವೇಳೆ ವಾಹನವೊಂದು ಟ್ರಕ್ ಗೆ ಡಿಕ್ಕಿ ಹೊಡೆದು ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ 8 ಜನರು ದುರ್ಮರಣಕ್ಕೀಡಾಗಿರುವ ಘಟನೆ ರಾಜಸ್ಥಾನದ ಟೋಂಕ್ ಪ್ರದೇಶದಲ್ಲಿ ನಡೆದಿದೆ.
ಮೃತ ದುರ್ದೈವಿಗಳು ರಾಜಸ್ಥಾನದ ಖತುಶ್ಯಾಮ್ಜಿ ದೇವಸ್ಥಾನಕ್ಕೆ ಭೇಟಿ ನೀಡಿ ವಾಪಸ್ ಆಗುತ್ತಿದ್ದರು. ಘಟನೆಯಲ್ಲಿ ನಾಲ್ಕು ಜನರು ಗಂಭೀರವಾಗಿ ಗಾಯಗೊಂಡಿದ್ದು, ಆಸ್ಪತ್ರೆಗೆ ದಾಖಲಿಸಲಾಗಿದೆ. ಅಪಘಾತದ ಬಳಿಕ ಎರಡೂ ವಾಹನಗಳ ಚಾಲಕರೂ ಪರಾರಿಯಾಗಿದ್ದಾರೆ.
ಘಟನೆಗೆ ಸಂಬಂಧಿಸಿದಂತೆ ರಾಜಸ್ಥಾನ ಸಿಎಂ ಅಶೋಕ್ ಗೆಹ್ಲೋಟ್ ಸಂತಾಪ ಸೂಚಿಸಿದ್ದಾರೆ.
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ