Latest

ನೀರಾವರಿ ಆಯೋಗದ ನಿರ್ದೇಶಕರು ಸೇರಿ ನಾಲ್ವರ ದುರ್ಮರಣ

ಪ್ರಗತಿವಾಹಿನಿ ಸುದ್ದಿ; ಬೆಂಗಳೂರು: ಭೀಕರ ರಸ್ತೆ ಅಪಘಾತದಲ್ಲಿ ಕೇಂದ್ರ ನಿರಾವರಿ ಆಯೋಗದ ನಿರ್ದೇಶಕರಿಬ್ಬರು ಸೇರಿ ನಾಲ್ವರು ಮೃತಪಟ್ಟಿರುವ ಘಟನೆ ಬೆಂಗಳೂರಿನ ವಾರುವನಹಳ್ಳಿ ಬಳಿ ರಾಷ್ಟ್ರೀಯ ಹೆದ್ದಾರಿ 50ರಲ್ಲಿ ನಡೆದಿದೆ.

ಕುಷ್ಟಗಿಯಿಂದ ಬೆಂಗಳೂರಿಗೆ ಹೊರಟಿದ್ದ ಕಾರೊಂದು ಚಾಲಕನ ನಿಯಂತ್ರಣ ತಪ್ಪಿ ರಸ್ತೆ ವಿಭಜಕವನ್ನು ದಾಟಿ ಮತ್ತೊಂದು ರಸ್ತೆಯಲ್ಲಿ ಹೋಗುತ್ತಿದ್ದ ಅಧಿಕಾರಿಗಳ ಕಾರಿಗೆ ಗುದ್ದಿದೆ. ಪರಿಣಾಮ ಇಬ್ಬರು ಅಧಿಕಾರಿಗಳು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಇನ್ನಿಬ್ಬರು ಆಸ್ಪತ್ರೆಗೆ ಸಾಗಿಸುತ್ತಿದ್ದಾಗ ಮಾರ್ಗ ಮಧ್ಯೆ ಮೃತಪಟ್ಟಿದ್ದಾರೆ.

Home add -Advt

ಮೃತ ಅಧಿಕಾರಿಗಳನ್ನು ನೀರಾವರಿ ಆಯೋಗದಲ್ಲಿ ನಿರ್ದೇಶಕರಾಗಿದ್ದ ರಾಮಸ್ವಾಮಿ (50) ಹಾಗೂ ಜಿತೇಂದ್ರ (50) ಎಂದು ಗುರುತಿಸಲಾಗಿದೆ. ಇನ್ನಿಬ್ಬರು ತಿಪಟೂರು ಮೂಲದ ಕಾವ್ಯ ಹಾಗೂ ಶರಣಬಸವ ಎಂದು ಗುರುತಿಸಲಾಗಿದೆ. ಅಪಘಾತದಲ್ಲಿ ಐವರು ಗಂಭೀರವಾಗಿ ಗಾಯಗೊಂಡಿದ್ದಾರೆ.

Related Articles

Back to top button