Latest

ಸರಣಿ ಅಪಘಾತ; ಸ್ಥಳದಲ್ಲೇ ಇಬ್ಬರು ಸಾವು

ಪ್ರಗತಿವಾಹಿನಿ ಸುದ್ದಿ; ಬೆಂಗಳೂರು: ಬೆಳ್ಳಂ ಬೆಳಿಗ್ಗೆ ಸಂಭವಿಸಿದ ಭೀಕರ ಸರಣಿ ಅಪಘಾತದಲ್ಲಿ ಇಬ್ಬರು ಸಾವನ್ನಪ್ಪಿರುವ ಘಟನೆ ಬೆಂಗಳೂರಿನ ನೆಲಮಂಗಲ ಬಳಿ ನಡೆದಿದೆ.

ಮುಂದೆ ಚಲಿಸುತ್ತಿದ್ದ ಲಾರಿ ಚಾಲಕ ಏಕಾಏಕಿ ಬ್ರೇಕ್ ಹಾಕಿದ ಪರಿಣಾಮ ಓಮ್ನಿ ಕಾರು ಹಿಂದಿನಿಂದ ಬಂದು ಲಾರಿಗೆ ಗುದ್ದಿ ಕಾರು ಚಾಲಕ ಸಾವನ್ನಪ್ಪಿದ್ದಾರೆ. ಇದೇ ವೇಳೆ ವೇಗವಾಗಿ ಬಂದ ಬೈಕ್ ಓಮ್ನಿ ಕಾರಿಗೆ ಡಿಕ್ಕಿ ಹೊಡೆದಿದೆ. ಪರಿಣಾಮ ಬೈಕ್ ಸವಾರ ಕೂಡ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ.

ಘಟನೆ ಬಳಿಕ ಲಾರಿ ಚಾಲಕ ಸ್ಥಳದಿಂದ ಪರಾರಿಯಾಗಿದ್ದು, ನೆಲಮಂಗಲ ಸಂಚಾರಿ ಪೊಲೀಸರು ಸ್ಥಳಕ್ಕೆ ಬಂದು ಪರಿಶೀಲನೆ ನಡೆಸಿದ್ದಾರೆ.

 

Related Articles

Back to top button