ಪ್ರಗತಿವಾಹಿನಿ ಸುದ್ದಿ: ಕೋಲ್ಕತ್ತಾದಲ್ಲಿ ನಡೆದ ತರಬೇತಿ ನೀರತ ವೈದ್ಯೆಯ ಮೇಲೆ ನಡೆದ ಅತ್ಯಾಚಾರ ಮತ್ತು ಕೊಲೆ ಖಂಡಿಸಿ ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್ ಬೆಳಗಾವಿ ನಗರ ಘಟಕ ವತಿಯಿಂದ ರ್ಯಾಲಿ ಮಾಡುವ ಮೂಲಕ ಪ್ರತಿಭಟಿಸಲಾಯಿತು.
ಇಂದು ಬೆಳಗಾವಿ ನಗರದ ಬೋಗಾರ್ವೆಸ್ ಸರ್ಕಲ್ ನಿಂದ ಆರಂಭವಾದ ಪ್ರತಿಭಟನಾ ಜಾಥವು ಚೆನ್ನಮ್ಮ ವೃತ್ತ ತಲುಪಿ, ಅಲ್ಲಿ ರಸ್ತೆ ತಡೆದು ಮಾನವ ಸರಪಳಿ ನಿರ್ಮಿಸಿ ಘೋಷಣೆ ಕೂಗುತ್ತಾ ಪ್ರತಿಭಟಿಸಿದರು. ಈ ವೇಳೆ ಬಂಗಾಳ ಸಿಎಂ ಮಮತಾ ಬ್ಯಾನರ್ಜಿ ಅವರ ಫೋಟೋ ತುಳಿದು ಬೆಂಕಿ ಹಚ್ಚಲಾಯಿತು. ಮಮತಾ ಬ್ಯಾನರ್ಜಿ ಅವರು ರಾಜೀನಾಮೆ ನೀಡಬೇಕು ಎಂದು ಆಗ್ರಹಿಸಲಾಯಿತು.
ಬಳಿಕ ಮಾತನಾಡಿದ ಪ್ರತಿಭಟನಾ ನಿರತ ವಿದ್ಯಾರ್ಥಿಗಳು ದೇಶದಲ್ಲಿ ಮಹಿಳೆಯರಿಗೆ ರಕ್ಷಣೆ ಇಲ್ಲದಂತೆ ಆಗಿದೆ. ಕೋಲ್ಕತ್ತಾದಲ್ಲಿ ನಡೆದ ಅತ್ಯಾಚಾರ ಮತ್ತು ಕೊಲೆಯ ಆರೋಪಿಯನ್ನು ಗಲ್ಲಿಗೇರಿಸಿ ಎಂದು ಆಗ್ರಹಿಸಿದರು. ನಮ್ಮ ರಾಜ್ಯದಲ್ಲಿ ವಿದ್ಯಾರ್ಥಿನಿಯರಿಗೆ ರಕ್ಷಣೆ ನೀಡಲು ಸೂಕ್ತ ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸಿದರು.
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ