ಪ್ರಗತಿವಾಹಿನಿ ಸುದ್ದಿ; ಹೋಸಿಯಾಪುರ್: ಭಾರಿ ಮಳೆಯ ನಡುವೆಯೇ ರಸ್ತೆಗೆ ಡಾಂಬರೀಕರಣ ಮಾಡಿದ ಹಿನ್ನೆಲೆಯಲ್ಲಿ ಲೋಕೋಪಯೋಗಿ ಇಲಾಖೆಯ ಮೂವರು ಇಂಜಿನಿಯರ್ ಸೇರಿ ನಾಲ್ವರು ಅಧಿಕಾರಿಗಳನ್ನು ಸರ್ಕಾರ ಅಮಾನತುಗೊಳಿಸಿದ ಘಟನೆ ಪಂಜಾಬ್ ನಲ್ಲಿ ನಡೆದಿದೆ.
ಇಲ್ಲಿನ ಶೇರ್ ಪುರ್ ಡಕ್ಕನ್ ಗ್ರಾಮದಲ್ಲಿ ನಿರಂತರವಾಗಿ ಮಳೆಯಾಗುತ್ತಿದ್ದು, ರಸೆ ಮೇಲೆ ನೀರು ಹರಿಯುತ್ತಿದ್ದರೂ ಅಧಿಕಾರಿಗಳು ಕಾತಾಚಾರಕ್ಕಾಗಿ ಡಾಂಬರೀಕರಣ ಮಾಡಿದ್ದಾರೆ. ಈ ಕುರಿತು ಆಮ್ ಆದ್ಮಿ ಪಕ್ಷದ ಕಾರ್ಯಕರ್ತರೊಬ್ಬರು ವಿಡಿಯೋ ಮಾಡಿ ಸಾಮಾಜಿಕ ಜಾಲತಾಣಗಳಲ್ಲಿ ವಿಡಿಯೋ ಹರಿಬಿಟ್ಟಿದ್ದರು. ಅಧಿಕಾರಿಗಳ ವಿರುದ್ಧ ಆಕ್ರೋಶ ವ್ಯಕ್ತವಾಗಿತ್ತು.
ಇದರ ಬೆನ್ನಲ್ಲೇ ರಾಜ್ಯ ಸರ್ಕಾರ ಲೋಕೋಪಯೋಗಿ ಇಲಾಖೆಯ ಅಧಿಕಾರಿಗಳಾದ ತಾರ್ಸೆಮ್ ಸಿಂಗ್, ವಿಪನ್ ಕುಮಾರ್, ಪ್ರವೀಣ್ ಕುಮಾರ್ ಹಾಗೂ ಜಸ್ಬೀರ್ ಸಿಂಗ್ ಎಂಬುವವರನ್ನು ಸಸ್ಪೆಂಡ್ ಮಾಡಿ ಆದೇಶ ಹೊರಡಿಸಿದೆ.
ಸಂಕೇಶ್ವರ: ಅಕ್ರಮವಾಗಿ ಸಾಗಾಟ ಮಾಡಲಾಗುತ್ತಿದ್ದ ಪಡಿತರ ಅಕ್ಕಿ ವಶ
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ