
ಪ್ರಗತಿವಾಹಿನಿ ಸುದ್ದಿ, ಬೆಳಗಾವಿ: ಬೆಳಗಾವಿ ಗ್ರಾಮೀಣ ಕ್ಷೇತ್ರದ ಪಂತ ಬಾಳೇಕುಂದ್ರಿ ಗ್ರಾಮದ ಹನುಮಾನ ನಗರದ ರಸ್ತೆಗಳನ್ನು ಅಭಿವೃದ್ಧಿ ಪಡಿಸುವ ಸಲುವಾಗಿ 10 ಲಕ್ಷ ರೂ. ಗಳನ್ನು ಶಾಸಕಿ ಲಕ್ಷ್ಮೀ ಹೆಬ್ಬಾಳಕರ ಅವರು ಮಂಜೂರು ಮಾಡಿಸಿದ್ದು, ಕಾಂಕ್ರೀಟ್ ರಸ್ತೆ ನಿರ್ಮಾಣದ ಕಾಮಗಾರಿಗಳಿಗೆ ಸ್ಥಳೀಯ ಜನಪ್ರತಿನಿಧಿಗಳು, ಯುವ ಕಾಂಗ್ರೆಸ್ ಮುಖಂಡ ಮೃಣಾಲ್ ಹೆಬ್ಬಾಳಕರ ಮತ್ತಿತರರು ಮಂಗಳವಾರ ಚಾಲನೆ ನೀಡಿದರು.
ಈ ವೇಳೆ ಮಾತನಾಡಿದ ಮೃಣಾಲ್ ಹೆಬ್ಬಾಳಕರ, ಕ್ಷೇತ್ರಾದ್ಯಂತ ಅಭಿವೃದ್ಧಿ ಕೆಲಸಗಳನ್ನು ಕೈಗೊಳ್ಳುವ ನಿಟ್ಟಿನಲ್ಲಿ ಶಾಸಕಿ ಲಕ್ಷ್ಮೀ ಹೆಬ್ಬಾಳಕರ ಅವರು ತಾವು ಅನುಪಸ್ಥಿತರಿದ್ದರೂ ಆಯಾ ಗ್ರಾಮಗಳ ಪ್ರತಿನಿಧಿಗಳಿಗೆ ಸೂಚಿಸುವ ಮೂಲಕ ಯಾವುದೇ ಕಾರಣಕ್ಕೂ ಅಭಿವೃದ್ಧಿ ಕೆಲಸಗಳು ವಿಳಂಬವಾಗದಂತೆ ನೋಡಿಕೊಳ್ಳುತ್ತಿದ್ದಾರೆ. ಈ ಅಭಿವೃದ್ಧಿ ಕಾಮಗಾರಿಗಳ ಸದ್ಬಳಕೆಯನ್ನು ಗ್ರಾಮಸ್ಥರು ಮಾಡಿಕೊಳ್ಳಬೇಕು ಎಂದರು.
ಈ ಸಮಯದಲ್ಲಿ ಸ್ಥಳೀಯ ನಿವಾಸಿಗಳು, ಮೈನು ಅಗಸಿಮನಿ, ಅಪ್ಸರ್ ಜಮಾದಾರ, ಪ್ರೇಮ ಕೋಲಕಾರ, ಹೊನಗೌಡ ಪಾಟೀಲ, ಜಮೀಲ್ ಮುಲ್ಲಾ, ಪ್ರಕಾಶ, ಭಜಂತ್ರಿ, ಮಲ್ಲಪ್ಪ ಮಿಜ್ಜಿ, ಸುಧಾಮ ಕೋಲಕಾರ, ಕಿಶೋರ್ ಉಣಕಲ್, ಗೋಪಾಲ ಪತ್ತಾರ ಹಾಗೂ ಮುಂತಾದವರು ಉಪಸ್ಥಿತರಿದ್ದರು.
ಬೆಳಗಾವಿಯಲ್ಲಿ ಅಂತಾರಾಷ್ಟ್ರೀಯ ಪ್ರಶಿಕ್ಷಣಾ ಶಿಬಿರ
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ