
ಪ್ರಗತಿವಾಹಿನಿ ಸುದ್ದಿ, ಅಥಣಿ – ಅಥಣಿ ಉಪಚುನಾವಣೆಯ ಪ್ರಚಾರ ಈಗಾಗಲೇ ರಂಗೇರಿದ್ದು, ಇಂದು ಬಿಜೆಪಿ ರಾಜ್ಯಾಧ್ಯಕ್ಷ ನಳಿನ್‌ಕುಮಾರ ಕಟೀಲ್ ಆಗಮಿಸಿ ಅಭ್ಯರ್ಥಿ ಮಹೇಶ ಕುಮಠಳ್ಳಿ ಪರ ರೋಡ್ ಶೋ ನಡೆಸಿದರು. ಉಪಮುಖ್ಯಮಂತ್ರಿಗಳಾದ ಲಕ್ಷ್ಮಣ ಸವದಿ ಮತ್ತು ಗೋವಿಂದ ಕಾರಜೋಳ ಸಾಥ್ ನೀಡಿದರು.

ರೋಡ್ ಶೋನಲ್ಲಿ ಸಂಸದ ಭಗವಂತ ಖೂಭಾ, ಬಿಜೆಪಿ ಅಭ್ಯರ್ಥಿ ಮಹೇಶ್ ಕುಮಟಳ್ಳಿ ಶಶಿಕಾಂತ ನಾಯಕ ಅಥಣಿ ಚುನಾವಣಾ ಉಸ್ತುವಾರಿ ಶ್ರೀಕಾಂತ್ ಕುಲಕರ್ಣಿ ಹಾಗೂ ಬಿಜೆಪಿ ಅಭಿಮಾನಿಗಳು ಭಾಗವಹಿಸಿದ್ದರು.
ಜಗತ್ತಿನ ಅತ್ಯಂತ ಶ್ರೇಷ್ಠ ಸಂವಿಧಾನ
ಭಾರತೀಯ ಸಂವಿಧಾನ ಜಗತ್ತಿನ ಅತ್ಯಂತ ಶ್ರೇಷ್ಠ ಸಂವಿಧಾನವಾಗಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಹೇಳಿದರು.
ಅವರು ಅಥಣಿಯ ಬಿಜೆಪಿ ಕಾರ್ಯಾಲಯದಲ್ಲಿ ಹಮ್ಮಿಕೊಂಡ ಸಂವಿಧಾನ ದಿನದ ಕಾರ್ಯಕ್ರಮದಲ್ಲಿ ಮಾತನಾಡಿದರು. ನಿಜವಾಗಿ ಅಂಬೇಡ್ಕರ್ ಅವರಿಗೆ ಗೌರವ ದೊರೆತಿದ್ದು ಭಾರತೀಯ ಜನತಾಪಕ್ಷದ ನರೇಂದ್ರ ಮೋದಿಯವರಿಂದ. ಹಾಗೆ ನೋಡಿದರೆ ಚುನಾವಣೆಯಲ್ಲಿ ಕಾಂಗ್ರೆಸ್ ಅಂಬೇಡ್ಕರ್ ಅವರನ್ನು ವಿರೋಧಿಸಿತ್ತು. ಅವರ ಅಂತಿಮ ಸಂಸ್ಕಾರಕ್ಕೆ ಅವಕಾಶ ಕೊಡದ ಕಾಂಗ್ರೆಸ್ ಪಕ್ಷ ಅವರನ್ನು ರಾಜಕೀಯವಾಗಿ ಮಾತ್ರ ಬಳಸಿಕೊಂಡಿದೆ ಎಂದು ಹೇಳಿದರು.
ಡಿಸಿಎಂ ಗೋವಿಂದ ಕಾರಜೋಳ ಮಾತನಾಡಿ, ನರೇಂದ್ರ ಮೋದಿಯವರು ದೇಶದ ಅತ್ಯಂತ ಶ್ರೇಷ್ಠ ಗ್ರಂಥವೆಂದು ಸಂವಿಧಾನವನ್ನು ಗೌರವಿಸುತ್ತಿದ್ದಾರೆ. ಇಂದು ದೇಶದ 130 ಕೋಟಿ ಜನ ಗೌರವಿಸುವಂತದಾಗಿದೆ. ಆದ್ದರಿಂದ ದೇಶದಲ್ಲಿ ಅಂಬೇಡ್ಕರರಿಗೆ ನಿಜವಾದ ಗೌರವ ನೀಡಿದವರು ನರೇಂದ್ರ ಮೋದಿಯವರು. ಅಂಬೇಡ್ಕರ್ ಅವರನ್ನು ಕೇವಲ ಪೂಜಿಸಿದರೆ ಸಾಲದು, ಅವರ ತತ್ವ ಸಿದ್ಧಾಂತಗಳನ್ನು ಆಚರಣೆಗೆ ತರುವುದು ನಿಜವಾಗಿ ಅವರಿಗೆ ಗೌರವಿಸುವ ಕಾರ್ಯವಾಗಿದೆ ಎಂದು ಹೇಳಿದರು.
ಈ ಸಂದರ್ಭದಲ್ಲಿ ಡಿಸಿಎಂ ಲಕ್ಷ್ಮಣ ಸವದಿ, ಮಹೇಶ್ ಕುಮಟಳ್ಳಿ, ಶ್ರೀಕಾಂತ್ ಕುಲಕರ್ಣಿ, ಆನಂದ ದೇಶಪಾಂಡೆ, ಉಮೇಶ ಬಂಟೊಡಕರ, ,ಬಿಜೆಪಿ ಕಾರ್ಯಕರ್ತರು ಉಪಸ್ಥಿತರಿದ್ದರು.
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ