
ಪ್ರಗತಿವಾಹಿನಿ ಸುದ್ದಿ, ಉಗರಗೋಳ(ತಾ.ಸವದತ್ತಿ) – ಸೋಮವಾರ ಸಂಜೆ ೨ ತಾಸಿಗೂ ಅಧಿಕ ಕಾಲ ಸುರಿದ ಭಾರಿ ಮಳೆಯಿಂದಾಗಿ ಗ್ರಾಮದ ಹೆಗ್ಗೊಳ್ಳ ತುಂಬಿ ರಸ್ತೆಯಲ್ಲಿ ಹರಿಯುತ್ತಿದ್ದು, ಉಗರಗೋಳ-ಯಲ್ಲಮ್ಮನಗುಡ್ಡ ಮಾರ್ಗದ ರಸ್ತೆಯಲ್ಲಿ ಕೆಲಕಾಲ ಸಂಚಾರ ಸ್ಥಗಿತಗೊಂಡಿತ್ತು. ಇದರಿಂದ ವಾಹನ ಸವಾರರು ಪರದಾಡಿದರು.

ಮತ್ತೊಂದೆಡೆ, ಭಾರಿ ಮಳೆಯಿಂದಾಗಿ ಶ್ರೀಕ್ಷೇತ್ರ ಯಲ್ಲಮ್ಮನಗುಡ್ಡದ ಸುತ್ತಲಿನಲ್ಲಿರುವ ಹಳ್ಳ-ಕೊಳ್ಳಗಳು ತುಂಬಿ ಹರಿಯುತ್ತಿವೆ. ಯಲ್ಲಮ್ಮನಗುಡ್ಡದ ಎಣ್ಣೆ ಹೊಂಡದ ಬಳಿ ಇರುವ ಕೊಳ್ಳದಲ್ಲಿ ಅಪಾರ ಪ್ರಮಾಣದ ನೀರು ಧುಮ್ಮಿಕ್ಕುತ್ತಿದೆ. ಜೋಗುಳಬಾವಿ ಬಳಿ ಇರುವ ದಬದಬೆ ಜಲಪಾತವೂ ತುಂಬಿ ಹರಿಯುತ್ತಿದೆ.
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ