Belagavi NewsBelgaum NewsKannada NewsKarnataka News

*ನಾಗೇನಹಟ್ಟಿ ಗ್ರಾಮದಲ್ಲಿ ರಸ್ತೆ ಕಾಮಗಾರಿಗೆ ಚಾಲನೆ ; ಜ್ಞಾನೇಶ್ವರಿ ಸೋಹಳಾ ಪಾರಾಯಣ ಉದ್ಘಾಟನೆ*

ಪ್ರಗತಿವಾಹಿನಿ ಸುದ್ದಿ, ಬೆಳಗಾವಿ: ಬೆಳಗಾವಿ ಗ್ರಾಮೀಣ ವಿಧಾನಸಭಾ ಕ್ಷೇತ್ರದ ನಾಗೇನಹಟ್ಟಿ ಗ್ರಾಮದಲ್ಲಿ ಸುಮಾರು 21 ಲಕ್ಷ ರೂ. ವೆಚ್ಚದಲ್ಲಿ ನಿರ್ಮಾಣಗೊಳ್ಳುವ ರಸ್ತೆ ಕಾಮಗಾರಿಗೆ ಸ್ಥಳೀಯ ಜನಪ್ರತಿನಿಧಿಗಳ ಸಮ್ಮುಖದಲ್ಲಿ ಯುವ ಕಾಂಗ್ರೆಸ್ ಮುಖಂಡ ಮೃಣಾಲ ಹೆಬ್ಬಾಳಕರ್ ಭೂಮಿ ಪೂಜೆ ನೆರವೇರಿಸಿ ಚಾಲನೆ ನೀಡಿದರು.

ಈ ಸಂದರ್ಭದಲ್ಲಿ ಮಾತನಾಡಿದ ಅವರು, ಗ್ರಾಮೀಣ ಪ್ರದೇಶಗಳ ಅಭಿವೃದ್ಧಿಗೆ ಉತ್ತಮ ರಸ್ತೆಗಳ ನಿರ್ಮಾಣ ಅತ್ಯಂತ ಅಗತ್ಯವಾಗಿದ್ದು, ಜನರ ಸಂಚಾರಕ್ಕೆ ಸುಗಮತೆ ಒದಗಿಸುವ ಜೊತೆಗೆ ಗ್ರಾಮಗಳ ಸಮಗ್ರ ಅಭಿವೃದ್ಧಿಗೆ ಸಹಕಾರಿಯಾಗುತ್ತದೆ ಎಂದು ಹೇಳಿದರು. ನಾಗೇನಹಟ್ಟಿ ಗ್ರಾಮದಲ್ಲಿ ನಡೆಯುತ್ತಿರುವ ಈ ರಸ್ತೆ ಕಾಮಗಾರಿ ಪೂರ್ಣಗೊಂಡ ನಂತರ ಸ್ಥಳೀಯರಿಗೆ ಹೆಚ್ಚಿನ ಅನುಕೂಲವಾಗಲಿದೆ ಎಂದು ಅವರು ಅಭಿಪ್ರಾಯಪಟ್ಟರು.

ಭೂಮಿ ಪೂಜೆ ಕಾರ್ಯಕ್ರಮದಲ್ಲಿ ಗ್ರಾಮದ ಹಿರಿಯರು, ಸ್ಥಳೀಯ ಜನಪ್ರತಿನಿಧಿಗಳು, ಪಕ್ಷದ ಮುಖಂಡರು ಹಾಗೂ ಕಾರ್ಯಕರ್ತರು ಭಾಗವಹಿಸಿದ್ದರು.

Home add -Advt

ಇದೇ ಸಂದರ್ಭದಲ್ಲಿ ನಾಗೇನಹಟ್ಟಿ ಗ್ರಾಮದಲ್ಲಿ ಆಯೋಜಿಸಲಾಗಿದ್ದ “ಶ್ರೀ ಜ್ಞಾನೇಶ್ವರಿ ಸೋಹಳಾ ಪಾರಾಯಣ” ಕಾರ್ಯಕ್ರಮವನ್ನು ಸಹ ಮೃಣಾಲ ಹೆಬ್ಬಾಳಕರ್ ಉದ್ಘಾಟಿಸಿದರು. ಬಳಿಕ ಭಕ್ತರಿಗಾಗಿ ಆಯೋಜಿಸಲಾದ ಮಹಾಪ್ರಸಾದ ಸೇವೆಗೆ ಚಾಲನೆ ನೀಡಿದರು.

ಧಾರ್ಮಿಕ ಮತ್ತು ಸಾಂಸ್ಕೃತಿಕ ಕಾರ್ಯಕ್ರಮಗಳು ಸಮಾಜದಲ್ಲಿ ಸೌಹಾರ್ದತೆ ಹಾಗೂ ಭಕ್ತಿಭಾವವನ್ನು ಹೆಚ್ಚಿಸುವುದರಲ್ಲಿ ಪ್ರಮುಖ ಪಾತ್ರವಹಿಸುತ್ತವೆ ಎಂದು ಅವರು ತಿಳಿಸಿದರು.

ಈ ಕಾರ್ಯಕ್ರಮದಲ್ಲಿ ಗ್ರಾಮದ ಸಮಸ್ತ ಹಿರಿಯರು, ಮಹಿಳೆಯರು, ಭಕ್ತರು, ಪಕ್ಷದ ಮುಖಂಡರು ಹಾಗೂ ಕಾರ್ಯಕರ್ತರು ಹೆಚ್ಚಿನ ಸಂಖ್ಯೆಯಲ್ಲಿ ಉಪಸ್ಥಿತರಿದ್ದರು.

Related Articles

Back to top button