Kannada NewsKarnataka NewsLatest
ಬೆಳಗಾವಿ ಗ್ರಾಮೀಣದಲ್ಲಿ 30 ಲಕ್ಷ ರೂ. ವೆಚ್ಚದಲ್ಲಿ ರಸ್ತೆ ಅಭಿವೃದ್ಧಿಗೆ ಚಾಲನೆ

ಪ್ರಗತಿವಾಹಿನಿ ಸುದ್ದಿ, ಬೆಳಗಾವಿ- ಬೆಳಗಾವಿ ಗ್ರಾಮೀಣ ಕ್ಷೇತ್ರದ ನಾವಗೆ ಗ್ರಾಮದಲ್ಲಿ 30 ಲಕ್ಷ ರೂ,ಗಳ ವೆಚ್ಚದಲ್ಲಿ ಕಾಂಕ್ರೀಟ್ ರಸ್ತೆಯ ನಿರ್ಮಾಣದ ಕಾಮಗಾರಿಗಳಿಗೆ ಮಂಗಳವಾರ ಭೂಮಿ ಪೂಜೆ ನೆರವೇರಿಸಲಾಯಿತು.

ಗ್ರಾಮದ ಬಹುದಿನಗಳ ಬೇಡಿಕೆಯನ್ನು ಈಡೇರಿಸುತ್ತಿರುವುದಕ್ಕೆ ಗ್ರಾಮಸ್ಥರು ಸಂತಸ ವ್ಯಕ್ತಪಡಿಸಿ, ಶಾಸಕಿ ಲಕ್ಷ್ಮಿ ಹೆಬ್ಬಾಳಕರ್ ಅವರಿಗೆ ಧನ್ಯವಾದ ತಿಳಿಸಿದರು.

