Belagavi NewsBelgaum NewsKarnataka News

*ಕಣ್ಣಿಗೆ ಖಾರದಪುಡಿ ಎರಚಿ ಚಿನ್ನ ದೋಚಿ ದರೋಡೆಕೋರ ಪರಾರಿ*

ಪ್ರಗತಿವಾಹಿನಿ ಸುದ್ದಿ, ಬೆಳಗಾವಿ: ಎಲ್ ಆ್ಯಂಡ್ ಟಿ ಕಂಪನಿ ಅಧಿಕಾರಿಯೊಬ್ಬರ ಮನೆಗೆ ನುಗ್ಗಿ ಮನೆಯಲ್ಲಿದ್ದ ಅವರ ಪತ್ನಿಯ ಕಣ್ಣಿಗೆ ಖಾರದ ಪುಡಿ ಎರಚಿ ಏಳೂವರೆ ತೊಲೆ ಚಿನ್ನಾಭರಣ ಹಾಡಹಗಲೇ ದೋಚಿ ಪರಾರಿಯಾಗಿರುವ ಘಟನೆ ಬೆಳಗಾವಿಯ ಉದ್ಯಮಬಾಗ ಪೊಲೀಸ್‌ ಠಾಣೆಯ ವ್ಯಾಪ್ತಿಯಲ್ಲಿ ನಡೆದಿದೆ.

ಬೆಳಗಾವಿಯ ರಾಣಿ ಚನ್ನಮ್ಮ ನಗರದಲ್ಲಿ ಈ ಘಟನೆ ನಡೆದಿದ್ದು, ಘಟನೆಯಿಂದ ಸ್ಥಳೀಯರು ಬೆಚ್ಚಿಬಿದ್ದಿದ್ದಾರೆ.‌ ಚನ್ನಮ್ಮ ನಗರದಲ್ಲಿ ವಾಸವಿದ್ದ ಎಲ್&ಟಿ ಕಂಪನಿ ಉದ್ಯೋಗಿ ಮುರುಗನ್ ಹಾಗೂ ಪತ್ನಿ ಮೆನೆಯಲ್ಲಿದ್ದರು. ಬಳಿಕ ಮುರುಗನ್ ಕೆಲಸಕ್ಕೆ ತೆರಳಿದ ವೇಳೆ ಮನೆಗೆ ನುಗ್ಗಿದ ದರೋಡೆಕೋರ ಮಹಿಳೆಯ ಕಣ್ಣಿಗೆ ಖಾರದಪುಡಿ ಎರಚಿ ಕತ್ತು ಹಿಸುಕಿ ಕೊರಳಲ್ಲಿದ್ದ ಮಾಂಗಲ್ಯ, ಚಿನ್ನದ ಸರ ದೋಚಿ ಪರಾರಿಯಾಗಿದ್ದಾನೆ.‌

Home add -Advt

ಇನ್ನು ಈ ಘಟನೆಯು ಬೆಳಗಾವಿಯ ಉದ್ಯಮಬಾಗ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದ್ದು, ಘಟನಾ ಸ್ಥಳಕ್ಕೆ ಕ್ರೈಮ್ ಡಿಸಿಪಿ ನಿರಂಜನ್ ಅರಸ, ಖಡೇಬಜಾರ್ ಎಸಿಪಿ ಶೇಖ್ರಪ್ಪ, ಉದ್ಯಮಬಾಗ ಪೊಲೀಸ್ ಠಾಣೆಯ ಸಿಪಿಐ ಡಿ ಕೆ ಪಾಟೀಲ್ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

https://pragativahini.com/channaraja-hattiholimodaga-villageshri-mahalakshmi-devi-jatr

Related Articles

Back to top button