ಪ್ರಗತಿವಾಹಿನಿ ಸುದ್ದಿ; ಬೆಂಗಳೂರು: ಐಎ ಎಸ್ ಅಧಿಕಾರಿ ರೋಹಿಣಿ ಸಿಂಧೂರಿ ಐಪಿಎಸ್ ಅಧಿಕಾರಿ ಡಿ.ರೂಪಾ ನಡುವುಇನ ಸಮರ ತಾರಕಕ್ಕೇರಿರುವ ಬೆನ್ನಲ್ಲೇ ಸಾಮಾಜಿಕ ಕಾರ್ಯಕರ್ತ ದಿನೇಶ್ ಕಲ್ಲಹಳ್ಳಿ ರೋಹಿಣಿ ಸಿಂಧೂರಿ ವಿರುದ್ಧ ಮುಖ್ಯಕಾರ್ಯದರ್ಶಿ ವಂದಿತಾ ಶರ್ಮಾ ಅವರಿಗೆ ದೂರು ನೀಡಿದ್ದಾರೆ.
ಐಪಿಎಸ್ ಅಧಿಕಾರಿ ಡಿ.ರೂಪಾ ತಮ್ಮ ಫೇಸ್ ಬುಕ್ ನಲ್ಲಿ ರೋಹಿಣಿ ಸಿಂಧೂರಿ ವಿರುದ್ಧ 19 ಆರೋಪಗಳನ್ನು ಮಾಡಿ, ಕೆಲ ಫೋಟೋಗಳನ್ನು ಬಿಡುಗಡೆ ಮಾಡಿದ್ದರು. ಅಲ್ಲದೇ ಹಲವು ವಿಚಾರಗಳನ್ನು ಪ್ರಸ್ತಾಪಿಸಿದ್ದರು. ಈ ಆರೋಪಗಳ ಬಗ್ಗೆ ಅಖಿಲ ಭಾರತ ಸೇವಾ (ನಡತೆ) ನಿಯಮಗಳು, 1962ರ ನಿಯಮದ ಅಡಿಯಲ್ಲಿ ತನಿಖೆ ನಡೆಸುವಂತೆ ದಿನೇಶ್ ಕಲ್ಲಹಳ್ಳಿ ದೂರಿನಲ್ಲಿ ಉಲ್ಲೇಖಿಸಿದ್ದಾರೆ.
ಡಿ. ರೂಪ ಮಾಡಿರುವ ಎಲ್ಲಾ ಆರೋಪಗಳ ಬಗ್ಗೆ ಸೂಕ್ತ ತನಿಖೆ ನಡೆಸಿ ಸತ್ಯಾಸತ್ಯತೆ ಹೊರಗೆಳೆಯಬೇಕು. ಇದು ಅಧಿಕಾರಿಗಳ ಮೇಲಿನ ನಂಬಿಕೆ-ಅಪನಂಬಿಕೆಗಳ ಕುರಿತ ಪ್ರಶ್ನೆ. ಸತ್ಯಾಂಶ ಏನೆಂಬುದನ್ನು ತನಿಖೆ ಮೂಲಕ ಕಂಡುಹಿಡಿದು ತಪ್ಪಿತಸ್ಥ ಅಧಿಕಾರಿಯ ವಿರುದ್ಧ ಕ್ರಮ ಜರುಗಿಸಬೇಕು ಎಂದು ಒತ್ತಾಯಿಸಿದ್ದಾರೆ.
*ಡಿ.ರೂಪಾ, ರೋಹಿಣಿ ಸಿಂಧೂರಿಗೆ ನೋಟೀಸ್; ಸಿಎಂ ಖಡಕ್ ಸೂಚನೆ*
https://pragati.taskdun.com/d-rooparohini-sindhurics-noticecm-basavaraj-bommai/
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ