
ಒಂದು ತಿಂಗಳ ಒಳಗಾಗಿ ವರದಿ ನೀಡುವಂತೆ ಸೂಚನೆ
ಪ್ರಗತಿವಾಹಿನಿ ಸುದ್ದಿ; ಬೆಂಗಳೂರು: ಐಎಎಸ್ ಅಧಿಕಾರಿ ರೋಹಿಣಿ ಸಿಂಧೂರಿ ವಿರುದ್ಧ ತನಿಖೆಗೆ ರಾಜ್ಯ ಸರ್ಕಾರ ಆದೇಶ ನೀಡಿದ್ದು, ತನಿಖಾಧಿಕಾರಿಯನ್ನು ಕೂಡ ನೇಮಕ ಮಾಡಿದೆ.
ಈ ಹಿಂದೆ ರೋಹಿಣಿ ಸಿಂಧೂರಿ ಮೈಸೂರು ಜಿಲ್ಲಾಧಿಕಾರಿಯಾಗಿದ್ದ ಸಂದರ್ಭದಲ್ಲಿ ಅವರ ವಿರುದ್ಧ ಹಲವು ಆರೋಪಗಳು ಕೇಳಿಬಂದಿದ್ದವು. ಮಾರುಕಟ್ಟೆ ಬೆಲೆಗಿಂತ ಹೆಚ್ಚು ಹಣ ಕೊಟ್ಟು ಬಟ್ಟೆ ಬ್ಯಾಗ್ ಖರೀದಿ ಹಗರಣ, 50 ಲಕ್ಷ ವೆಚ್ಚದಲ್ಲಿ ಮನೆಯಲ್ಲಿ ಅಕ್ರಮವಾಗಿ ಈಜುಕೊಳ, ಜಿಮ್ ನಿರ್ಮಾಣ, ಆಕ್ಸಿಜನ್ ಪೂರೈಕೆ ವಿಳಂಬದಿಂದ ಚಾಮರಾಜನಗರ ಆಸ್ಪತ್ರೆಯಲ್ಲಿ ರೋಗಿಗಳ ಸಾವು, ಕೋವಿಡ್ ಸೋಂಕಿತರ ಸಾವಿನ ಸಂಖ್ಯೆ ಮುಚ್ಚಿಟ್ಟ ಆರೋಪ ಸೇರಿದಂತೆ ಹಲವು ಆರೋಪಗಳು ಕೇಳಿಬಂದಿದ್ದವು.
ಈ ಹಿನ್ನೆಲೆಯಲ್ಲಿ ರೋಹಿಣಿ ಸಿಂಧೂರಿ ವಿರುದ್ಧ ರಾಜ್ಯ ಸರ್ಕಾರ ತನಿಖೆಗೆ ಆದೇಶ ನೀಡಿದ್ದು, ತನಿಖಾಧಿಕಾರಿಯನ್ನಾಗಿ ಬೆಂಗಳೂರು ಜಲಮಂಡಳಿ ಅಧ್ಯಕ್ಷ ಎನ್.ಜಯರಾಮ್ ಅವರನ್ನು ನೇಮಕ ಮಾಡಿದೆ. ಒಂದು ತಿಂಗಳ ಒಳಗಾಗಿ ವರದಿ ನೀಡುವಂತೆ ಸೂಚಿಸಿದೆ.
ಹೈಕಮಾಂಡ್ ಬುಲಾವ್; ಸಿಎಂ ಬೊಮ್ಮಾಯಿ ದಿಢೀರ್ ದೆಹಲಿಗೆ
 
					 
				 
					 
					 
					 
					
 
					 
					 
					


