LatestUncategorized

ಬಾಲಿವುಡ್ ನಟನ ಜಾಗ ಒತ್ತುವರಿ; IAS ಅಧಿಕಾರಿ ರೋಹಿಣಿ ಸಿಂಧೂರಿ ಪತಿಯ ವಿರುದ್ಧ ದೂರು

ಪ್ರಗತಿವಾಹಿನಿ ಸುದ್ದಿ; ಬೆಂಗಳೂರು: ಐಎ ಎಸ್ ಅಧಿಕಾರಿ ರೋಹಿಣಿ ಸಿಂಧೂರು ಪತಿಯ ವಿರುದ್ಧ ಅಕ್ರಮ ಭೂ ಕಬಳಿಕೆ ಆರೋಪ ಕೇಳಿಬಂದಿದೆ. ರೋಹಿಣಿ ಸಿಂಧೂರಿ ಪತಿ ತನ್ನ ಜಮೀನು ಒತ್ತುವರಿ ಮಾಡಿಕೊಂಡಿದ್ದಾರೆ ಎಂದು ಆರೋಪಿಸಿ ಬಾಲಿವುಡ್ ನಟ, ಗಾಯಕ ಡಿಜಿಪಿ ಪ್ರವೀಣ್ ಸೂದ್ ಅವರಿಗೆ ದೂರು ನೀಡಿದ್ದಾರೆ.

ಬಾಲಿವುಡ್ ನಟ ಮೊಹಮ್ಮದ್ ಅಲಿ ಪುತ್ರ ಲಕ್ಕಿ ಅಲಿ, ಡಿಜಿಪಿ ಪ್ರವೀಣ್ ಸೂದ್ ಅವರಿಗೆ ಟ್ವೀಟ್ ಮೂಲಕ ದೂರು ನೀಡಿದ್ದಾರೆ. ಯಲಹಂಕದ ಕೆಂಚೇನಹಳ್ಳಿ ಬಳಿಯ ಲಕ್ಕಿ ಅಲಿ ಅವರ ಜಮೀನನ್ನು ರೋಹಿಣಿ ಪತಿ ತಮ್ಮ ರೋಹಿಣಿ ಸಿಂಧೂರಿ ಪತ್ನಿ ಸಹಾಯದಿಂದ ಜಾಗ ಒತ್ತುವರಿ ಮಾಡಿಕೊಂಡಿದ್ದಾರೆ. ಸುಧೀರ್ ರೆಡ್ಡಿ ಹಾಗೂ ಮಧು ರೆಡ್ಡಿ ಎಂಬುವವರಿಂದ ಜಾಗ ಒತ್ತುವರಿ ಮಾಡಿಕೊಳ್ಳಲಾಗಿದೆ ಎಂದು ಆರೋಪಿಸಿದ್ದಾರೆ.

ದೂರಿನ್ ಅಬಗ್ಗೆ ಡಿಜಿಪಿ ಯಾವುದೇ ಪ್ರತಿಕ್ರಿಯೆ ನೀಡಿಲ್ಲ. ಈ ಬಗ್ಗೆಗೃಹ ಸಚಿವ ಅರಗ ಜ್ಞಾನೇಂದ್ರ ಪ್ರತಿಕ್ರಿಯಿಸಿದ್ದು, ಯಾವ ಕಾರಣಕ್ಕೆ ಪೊಲೀಸರು ದೂರು ಸ್ವೀಕರಿಸಲು ನಿರಾಕರಿಸಿದ್ದಾರೆ? ಯಾವ ಪೊಲೀಸ್ ಠಾಣೆ ಎಂಬ ಬಗ್ಗೆ ಮಾಹಿತಿ ತರಿಸಿಕೊಳ್ಳುತ್ತೇನೆ ಡಿಜಿ ಜೊತೆಯೂ ಮಾತನಾಡುತ್ತೇನೆ ಎಂದಿದ್ದಾರೆ.

ಕಾಂಗ್ರೆಸ್ ನವರದ್ದು ಭೂತದ ಬಾಯಲ್ಲಿ ಭಗವದ್ಗೀತೆ; ಸಚಿವ ಸುಧಾಕರ್ ತಿರುಗೇಟು

Home add -Advt

https://pragati.taskdun.com/dr-sudhakarreactioncongressrowda-rajakiya/

ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ

Related Articles

Back to top button