Latest

*ಡಿ.ರೂಪಾ ಆರೋಪಕ್ಕೆ ಮೌನಮುರಿದ ರೋಹಿಣಿ ಸಿಂಧೂರಿ; ಕೇಸ್ ದಾಖಲಿಸಲು ನಿರ್ಧಾರ*

ಪ್ರಗತಿವಾಹಿನಿ ಸುದ್ದಿ; ಬೆಂಗಳೂರು: ತಮ್ಮ ವಿರುದ್ಧ ಐಪಿಎಸ್ ಅಧಿಕಾರಿ ಡಿ.ರೂಪಾ ಮಾಡಿರುವ ಸಾಲು ಸಾಲು ಆರೋಪಗಳಿಗೆ ತಿರುಗೇಟು ನೀಡಿರುವ ಐಎ ಎಸ್ ಅಧಿಕಾರಿ ರೋಹಿಣಿ ಸಿಂಧೂರಿ, ರೂಪಾ ಮೌದ್ಗಿಲ್, ನನ್ನ ವಿರುದ್ಧ ಆಧಾರರಹಿತ ಆರೋಪ ಮಾಡುವ ಮೂಲಕ ವೈಯಕ್ತಿಕ ನಿಂದನೆ, ತೇಜೋವಧೆ ಮಾಡಿದ್ದಾರೆ ಎಂದು ಹೇಳಿದ್ದಾರೆ.

ಡಿ.ರೂಪಾ ಮಾಡಿರುವ ಆರೋಪಕ್ಕೆ ಮೊದಲ ಬಾರಿಗೆ ಮೌನಮುರಿದ ರೋಹಿಣಿ ಸಿಂಧೂರಿ, ನಾನು ವಾಟ್ಸಪ್ ಸ್ಟೇಟಸ್ ಗಳಲ್ಲಿ ಹಾಕಿದ್ದ ಫೋಟೋಗಳನ್ನು ಬಳಸಿ ನನ್ನ ವಿರುದ್ಧ ನಿಂದನೆ ಮಾಡಿದ್ದಾರೆ. ನಾನು ಯಾವ ಅಧಿಕಾರಿಗಳಿಗೆ ಫೋಟೋ ಕಳುಹಿಸಿದ್ದೆ ಎಂಬುದನ್ನು ಅವರ ಹೆಸರು ಬಹಿರಂಗಪಡಿಸಬೇಕು. ಈ ಬಗ್ಗೆ ತನಿಖೆ ನಡೆಯಬೇಕು ಎಂದು ಆಗ್ರಹಿಸಿದ್ದಾರೆ.

ಡಿ.ರೂಪಾ ಮಾನಸಿಕ ಸ್ಥಿಮಿತ ಕಳೆದುಕೊಂಡವಂತೆ ವರ್ತಿಸುತ್ತಿದ್ದಾರೆ. ನನ್ನ ವಿರುದ್ಧ ಆಧಾರರಹಿತ ಆರೋಪ ಮಾಡುವ ಮೂಲಕ ಮಾಧ್ಯಮದ ಗಮನ ಸೆಳೆಯುತ್ತಿದ್ದಾರೆ. ಜವಾಬ್ದಾರಿಯುತ ಸ್ಥಾನದಲ್ಲಿದ್ದು ವೈಯಕ್ತಿಕ ದ್ವೇಷಕಾರುವುದು ಸಮಾಜಕ್ಕೆ ಅಪಾಯ. ಸಾಮಾಜಿಕ ಜಾಲತಾಣಗಳಲ್ಲಿ ಈ ರೀತಿ ಪೋಸ್ಟ್ ಗಳ ಮೂಲಕ ಸುದ್ದಿಯಲ್ಲಿರಲು ಪ್ರಯತ್ನಿಸುತ್ತಿದ್ದಾರೆ. ಒಳ್ಳೆಯ ಕೆಲಸ ಮಾಡುವುದನ್ನು ಬಿಟ್ಟು ಇನ್ನೊಬ್ಬರ ತೇಜೋವಧೆ ಮಾದುತ್ತಿರುವುದು ಎಷ್ಟು ಸರಿ? ತಾವು ಧ್ವೇಷಿಸುವ ವ್ಯಕ್ತಿಗಳ ವಿರುದ್ಧ ವೈಯಕ್ತಿಕ ಹಗೆತನ ಸಾಧಿಸಲು ಯತ್ನಿಸಿದ್ದಾರೆ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ವೈಯಕ್ತಿಕ ನಿಂದನೆ, ತೇಜೋವಧೆ ವಿರುದ್ಧ ಐಪಿಎಸ್ ಸೆಕ್ಷನ್ ಗಳ ಅಡಿ ಕಾನೂನು ಕ್ರಮ , ಸಕ್ಷಮ ಪ್ರಾಧಿಕಾರದ ಮುಂದೆ ದೂರು ಸಲ್ಲಿಸುತ್ತೇನೆ ಎಂದು ತಿಳಿಸಿದ್ದಾರೆ.

*ಈಗ ರಿಲೀಸ್ ಮಾಡಿದ್ದು ಕೇವಲ ಸ್ಯಾಂಪಲ್ ಅಷ್ಟೇ; ಮತ್ತೆ ಕಿಡಿಕಾರಿದ IPS ಅಧಿಕಾರಿ ಡಿ.ರೂಪಾ*

https://pragati.taskdun.com/d-rooparohini-sinduriphoto-viralpressmeet/

ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ

Related Articles

Back to top button