ಪ್ರಗತಿವಾಹಿನಿ ಸುದ್ದಿ; ಬೆಂಗಳೂರು: ಇಬ್ಬರು ಮಹಿಳಾ ಅಧಿಕಾರಿಗಳ ಕಿತ್ತಾಟ ತಾರಕಕ್ಕೇರಿದ್ದು, ಐಪಿಎಸ್ ಅಧಿಕಾರಿ ಡಿ.ರೂಪಾ ತನ್ನ ವಿರುದ್ಧ ಮಾಡಿರುವ ಆರೋಪಗಳಿಗೆ ಐಎ ಎಸ್ ಅಧಿಕಾರಿ ರೋಹಿಣಿ ಸಿಂಧೂರಿ ಸರ್ಕಾರದ ಮುಖ್ಯಕಾರ್ಯದರ್ಶಿ ವಂದಿತಾ ಶರ್ಮಾ ಅವರಿಗೆ ದೂರು ನೀಡಿದ್ದಾರೆ.
ವಿಧಾನಸೌಧದಲ್ಲಿ ಮಾತನಾಡಿದ ರೋಹಿಣಿ ಸಿಂಧೂರಿ, ಡಿ.ರೂಪಾ ನನ್ನ ವಿರುದ್ಧ ಇಲ್ಲಸಲ್ಲದ ಆರೋಪಗಳನ್ನು ಮಾಡುತ್ತಿದ್ದಾರೆ. ಈ ಬಗ್ಗೆ ಸಿಎಸ್ ವಂದಿತಾ ಶರ್ಮಾ ಅವರಿಗೆ ದೂರು ನೀಡಿದ್ದೇನೆ ಎಂದರು.
ಸರ್ಕಾರಿ ಅಧಿಕಾರಿಗಳು ಮಾಧ್ಯಮಗಳ ಮುಂದೆ ಮಾತನಾಡಬಾರದು ಎಂಬ ನಿಯಮವಿದೆ. ಹಾಗಾಗಿ ಮಾತನಾಡಲು ಆಗಿಲ್ಲ, ನಾನು ಯಾವುದೇ ಟ್ವಿಟರ್, ಫೇಸ್ ಬುಕ್ ಸೋಷಿಯಲ್ ಮೀಡಿಯಾಗಳಲ್ಲಿ ಅಕ್ಟೀವ್ ಆಗಿಲ್ಲ. ನಾನು ಯಾವುದೇ ಫೋಟೋಗಳನ್ನು ಕಳುಹಿಸಿಲ್ಲ. ಇಷ್ಟಕ್ಕೂ ಡಿ.ರೂಪಾ ಅವರಿಗೂ ನನಗೂ ಯಾವುದೇ ಸಂಬಂಧವಿಲ್ಲ, ಅವರ ಕಾರ್ಯವ್ಯಾಪ್ತಿಯೇ ಬೇರೆ, ನನ್ನ ಕಾರ್ಯವ್ಯಾಪ್ತಿಯೇ ಬೇರೆ. ಹೀಗಿರುವಾಗ ಅನಗತ್ಯವಾಗಿ ಯಾಕೆ ನನ್ನ ವಿರುದ್ಧ ಆರೋಪ ಮಾಡಿ ವೈಯಕ್ತಿಕ ತೇಜೋವಧೆ ಮಾಡುತ್ತಿದ್ದಾರೆ? ಎಂದು ಪ್ರಶ್ನಿಸಿದರು.
ನಾನು ಮೂರು ಅಧಿಕಾರಿಗಳಿಗೆ ಫೋಟೋ, ಮೆಸೆಜ್ ಕಳುಹಿಸಿದ್ದೇನೆ ಎಂದಿದ್ದಾರೆ. ನಾನು ಯಾವ ಅಧಿಕಾರಿಗಳಿಗೆ ಕಳುಹಿದ್ದೇನೆ? ಆ ಮೂವರ ಹೆಸರು ಹೇಳಲಿ. ಡಿ.ರೂಪಾ ನನ್ನ ವಿರುದ್ಧ ಮಾಡುತ್ತಿರುವ ಆರೋಪಗಳ ಬಗ್ಗೆ ಸಿಎಸ್ ಅವರಿಗೆ ಸಂಪೂರ್ಣವಾಗಿ ಮಾಹಿತಿ ನೀಡಿದ್ದೇನೆ. ಕ್ರಮ ಕೈಗೊಳ್ಳುವಂತೆ ಹೇಳಿದ್ದೇನೆ ಎಂಡು ತಿಳಿಸಿದರು.
*Get Well Soon: ಡಿ.ರೂಪಾ ಆರೋಪಕ್ಕೆ ಖಡಕ್ ಉತ್ತರ ನೀಡಿದ ರೋಹಿಣಿ ಸಿಂಧೂರಿ*
https://pragati.taskdun.com/rohini-sindhurireactiond-roopaget-well-soon/
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ