*ರೋಜಗಾರ್ ಮೇಳದಡಿ 7 ಲಕ್ಷ ಯುವಕರಿಗೆ ಉದ್ಯೋಗ: ಕೇಂದ್ರ ಸಚಿವ ಪ್ರಹ್ಲಾದ ಜೋಶಿ*
ಪ್ರಗತಿವಾಹಿನಿ ಸುದ್ದಿ: ಪ್ರಧಾನ ಮಂತ್ರಿ ಅವರ ರೋಜಗಾರ್ ಉದ್ಯೋಗ ಮೇಳ ದೇಶದ ಯುವ ಸಮೂಹಕ್ಕೆ ಉದ್ಯೋಗ ಒದಗಿಸುವ ಪ್ರಮುಖ ಮಾದ್ಯಮವಾಗಿದೆ ಎಂದು ಕೇಂದ್ರ ಸಂಸದೀಯ ಸಚಿವ ಪ್ರಹ್ಲಾದ ಜೋಶಿ ಹೇಳಿದರು.
ಬೆಂಗಳೂರಿನಲ್ಲಿ ಇಂದು ಬಿಎಸ್ಎಫ್ ಆಯೋಜಿಸಿದ್ದ ಉದ್ಯೋಗ ಮೇಳ ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಯಾಗಿ ಮಾತನಾಡಿದರು.
ಪ್ರಧಾನಮಂತ್ರಿ ರೋಜಗಾರ್ ಯೋಜನೆಯಡಿ ಮೋದಿ ಅವರ ಅವಧಿಯಲ್ಲಿ 7 ಲಕ್ಷ ಯುವಕರಿಗೆ ಉದ್ಯೋಗ ಕಲ್ಪಿಸಲಾಗಿದೆ ಎಂದು ಜೋಶಿ ತಿಳಿಸಿದರು.
ರೋಜ್‌ಗಾರ್ ಮೇಳ ದೇಶದ ಯುವಕರಿಗೆ ಉದ್ಯೋಗವನ್ನು ಒದಗಿಸುವ ಪ್ರಬಲ ಮಾಧ್ಯಮವೆಂಬುದು ಈಗ ಸಾಬೀತಾಗಿದೆ ಎಂದು ಪ್ರತಿಪಾದಿಸಿದರು.
2022ರ ಅಕ್ಟೋಬರ್‌ನಲ್ಲಿ ಪ್ರಧಾನಮಂತ್ರಿ ನರೇಂದ್ರ ಮೋದಿಯವರು ಇದನ್ನು ಮಿಷನ್ ಮೋಡ್‌ನಲ್ಲಿ ಪ್ರಾರಂಭಿಸಿದಾಗಿನಿಂದ ಈವರೆಗೆ 7 ಲಕ್ಷಕ್ಕೂ ಅಧಿಕ ಯುವಕ – ಯುವತಿಯರು ಉದ್ಯೋಗ ಕಂಡುಕೊಂಡಿದ್ದಾರೆ ಎಂದರು.
ಯುವಕರ ಸಬಲೀಕರಣಕ್ಕೆ ಮತ್ತು ಅವರಿಗೆ ಉದ್ಯೋಗ ಒದಗಿಸುವ ಮೂಲಕ ಅಭಿವೃದ್ಧಿ ಹೊಂದಿದ ಹಾಗೂ ಸ್ವಾವಲಂಬಿ ಭಾರತವನ್ನು ರಚಿಸುವಲ್ಲಿ ಮೋದಿ ಸರ್ಕಾರ ಸಾಧನೆ ತೋರಿದೆ ಎಂದು ಬಣ್ಣಿಸಿದರು.
ಕೇಂದ್ರ ಸರ್ಕಾರದ ವಿವಿಧ ಸಚಿವಾಲಯಗಳು, ಇಲಾಖೆಗಳು ಮತ್ತು ಘಟಕಗಳಲ್ಲಿ ನೇಮಕಗೊಂಡ ಯುವಕರಿಗೆ ಇದೇ ವೇಳೆ ಸಚಿವ ಪ್ರಹ್ಲಾದ ಜೋಶಿ ನೇಮಕಾತಿ ಪತ್ರಗಳನ್ನು ವಿತರಿಸಿದರು.
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ