CrimeKannada NewsKarnataka NewsLatestTravel

*ಚಲಿಸುತ್ತಿದ್ದ ಬಸ್ ನಿಂದ ಉಗುಳಲು ಯತ್ನಿಸಿದ ವ್ಯಕ್ತಿಯ ರುಂಡ್ ಕಟ್*

ಪ್ರಗತಿವಾಹಿನಿ ಸುದ್ದಿ: ಚಲಿಸುತ್ತಿದ್ದ ಬಸ್ ನಿಂದ ಉಗುಳಲು ಯತ್ನಿಸಿದ ವ್ಯಕ್ತಿಯ ರುಂಡ್ ಕಟ್ ಆಗಿರುವ ಆಘಾತಕಾರಿ ಘಟನೆ ನಡೆದಿದೆ.

ಹುಬ್ಬಳ್ಳಿಯಿಂದ ಶೆರೆವಾಡ ಕಡೆಗೆ ಸಾಗುತ್ತಿದ್ದ ಬಸ್‌ನಲ್ಲಿ ಈ ಘಟನೆ ಸಂಭವಿಸಿದೆ. ವ್ಯಕ್ತಿ ಕಿಟಕಿಯಿಂದ ತಲೆ ಹೊರಹಾಕಿ ಉಗುಳಲು ಯತ್ನಿಸಿದ್ದಾಗ, ಹಿಂದಿನಿಂದ ಅತಿ ವೇಗವಾಗಿ ಬಂದ ಮತ್ತೊಂದು ಬಸ್ ಪಕ್ಕದಲ್ಲೇ ಹಾದು ಹೋಗಿದೆ. ಈ ವೇಳೆ, ಬಸ್‌ನ ಕಿಟಕಿಯಿಂದ ಹೊರಗಿದ್ದ ಆತನ ರುಂಡ ಕಟ್ ಆಗಿದೆ. ಮೃತದೇಹವು ಪ್ರಯಾಣಿಸುತ್ತಿದ್ದ ಬಸ್‌ನಲ್ಲೇ ಉಳಿದಿದ್ದರೆ, ರುಂಡ ಡಿಕ್ಕಿ ಹೊಡೆದ ಇನ್ನೊಂದು ಬಸ್‌ನಲ್ಲಿ ಸಿಕ್ಕಿಹಾಕಿಕೊಂಡಿದೆ ಎಂದು ತಿಳಿದುಬಂದಿದೆ.

ಈ ಘಟನೆ ಗಮನಿಸಿದ ಬಸ್ ಚಾಲಕರು ತಕ್ಷಣ ವಾಹನ ನಿಲ್ಲಿಸಿ ಸಂಬಂಧಪಟ್ಟ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಸ್ಥಳಕ್ಕೆ ಧಾವಿಸಿದ ಪೊಲೀಸರು ಪರಿಶೀಲನೆ ನಡೆಸಿ ಮುಂದಿನ ಕ್ರಮ ಕೈಗೊಂಡಿದ್ದಾರೆ.

ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ

Related Articles

Back to top button