
ಪ್ರಗತಿವಾಹಿನಿ ಸುದ್ದಿ: ರೌಡಿಶೀಟರ್ ಒಬ್ಬ ಆತ್ಮಹತ್ಯೆಗೆ ಶರಣಾಗಿರುವ ಘಟನೆ ಬೆಂಗಳೂರು ನಗರ ಜಿಲ್ಲೆಯ ಆನೇಕಲ್ ನಲ್ಲಿ ನಡೆದಿದೆ.
ಅರುಣ್ ಅಲಿಯಾಸ್ ಚಿನ್ನಿ (೨೮) ಆತ್ಮತ್ಯೆ ಮಾಡಿಕೊಂಡವ. ಈತ ೨೦೧೯ರಲ್ಲಿ ಲೋಕನಾಥ್ ಕೊಲೆ ಪ್ರಕರಣದಲ್ಲಿ ಜೈಲು ಸೇರಿದ್ದ ಬಳಿಕ ಜಾಮೀನು ಪಡೆದು ಬಿಡುಗಡೆಯಾಗಿದ್ದ. ಕೆಲ ದಿನಗಳಿಂದ ಖಿನ್ನತೆಯಿಂದ ಬಳಲುತ್ತಿದ್ದ ಎನ್ನಲಾಗಿದೆ.
ಈಗ ಮನೆಯಲ್ಲಿ ಯಾರೂ ಇಲ್ಲದ ವೇಳೆ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಆನೇಕಲ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ