ಪ್ರಗತಿವಾಹಿನಿ ಸುದ್ದಿ: ರೌಡಿಶೀಟರ್ ನನ್ನು ಬಂಧಿಸಲು ಹೋದ ಪೊಲೀಸ್ ಸಿಬ್ಬಂದಿ ಮೇಲೆಯೇ ಆತ ಚಾಕುವಿನಿಂದ ಹಲ್ಲೆ ನಡೆಸಿದ್ದು, ಆತ್ಮರಕ್ಷಣೆಗಾಗಿ ಪೊಲೀಸರು ಗುಂಡಿನ ದಾಳಿ ನಡೆಸಿರುವ ಘಟನೆ ಮಂಡ್ಯದಲ್ಲಿ ನಡೆದಿದೆ.
ಮಳವಳ್ಳಿ ತಾಲೂಕಿನ ಚಿಕ್ಕಮಲಗೂಡು ಗ್ರಾಮದಲ್ಲಿ ರೌಡಿಶೀಟರ್ ಮುತ್ತುರಾಜ್ ಅಲಿಯಾಸ್ ಡಕ್ಕ ಎಂಬಾತನ್ನು ಹಿಡಿಯಲು ಹೋದಾಗ ಪೊಲೀಸ್ ಸಿಬ್ಬಮ್ದಿ ಸಿದ್ದರಾಜು ಎಂಬುವವರ ಮೇಲೆ ಚಾಕುವಿನಿಂದ ಇರಿದು ಹಲ್ಲೆ ಮಾಡಿದ್ದಾನೆ. ಈ ವೇಳೆ ಸರ್ಕಲ್ ಇನ್ಸ್ ಪೆಕ್ಟರ್ ಶ್ರೀಧರ್ ಆರೋಪಿ ಡಕ್ಕನ ಕಾಲಿಗೆ ಫೈರಿಂಗ್ ಮಾಡಿ, ಬಂಧಿಸಿದ್ದಾರೆ.
ಆರೋಪಿ ಬಲಗಾಲಿಗೆ ಗುಂಡೇಟು ತಗುಲಿದ್ದು, ಆತನನ್ನು ಮಂಡ್ಯ ಮಿಮ್ಸ್ ಆಸ್ಪತ್ರೆಗೆ ದಾಖಲಿಸಲಾಗಿದೆ. ಆರೋಪಿ ಡಕ್ಕ ಕೊಲೆ ಕೇಸ್ ಸೇರಿದಂತೆ 11 ಪ್ರಕರಣಗಳು ದಾಖಲಾಗಿದ್ದವು. ಈ ಹಿನ್ನೆಲೆಯಲ್ಲಿ ಬಂಧನಕ್ಕೆ ಮುಂದಾಗಿದ್ದ ವೇಳೆ ತಪ್ಪಿಸಿಕೊಳ್ಳಲು ಪೊಲೀಸರ ಮೇಲೆ ಹಲ್ಲೆ ನಡೆಸಿದ್ದ.
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ