Karnataka NewsPolitics

*ವಿಚಾರಣೆಗೆ ಹಾಜರಾದ ಬಿಜೆಪಿ ಶಾಸಕ ಭೈರತಿ ಬಸವರಾಜ್*

ಪ್ರಗತಿವಾಹಿನಿ ಸುದ್ದಿ: ರೌಡಿಶೀಟರ್ ಬಿಕ್ಲು ಶಿವ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಬಿಜೆಪಿ ಶಾಸಕ ಭೈರತಿ ಬಸವರಾಜ್ ವಿಚಾರಣೆಗೆ ಹಾಜರಾಗಿದ್ದಾರೆ.

ರೌಡಿಶೀಟರ್ ಬಿಕ್ಲು ಶಿವ ಹತ್ಯೆ ಪ್ರಕರಣದಲ್ಲಿ ಕೆಆರ್.ಪುರಂ ಶಾಸಕ ಭೈರತಿ ಬಸವರಾಜ್ ವಿರುದ್ಧ ಎಫ್ಐಆರ್ ದಾಖಲಾಗಿತ್ತು. ಈ ಹಿನ್ನೆಲೆಯಲ್ಲಿ ಬೆಂಗಳೂರಿನ ಭಾರತಿ ನಗರ ಪೊಲೀಸ್ ಠಾಣೆಗೆ ವಿಚಾರಣೆಗೆ ಹಾಜರಾಗಿದ್ದಾರೆ. ಇಂದು ಎರಡನೇ ಬಾರಿಗೆ ಭೈರತಿ ಬಸವರಾಜ್ ವಿಚಾರಣೆಗೆ ಹಾಜರಾಗಿದ್ದಾರೆ.

ತನಿಖಾಧಿಕಾರಿ ಪ್ರಕಾಶ್ ರಾಥೋಡ್, ಭೈರತಿ ಬಸವರಾಜ್ ಅವರ ವಿಚಾರಣೆ ನಡೆಸಿದ್ದಾರೆ ಎಂದು ತಿಳಿದುಬಂದಿದೆ.


ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ

Related Articles

Back to top button