ಪ್ರಗತಿವಾಹಿನಿ ಸುದ್ದಿ; ಬೆಂಗಳೂರು: ರೌಡಿ ಶೀಟರ್ ಸೈಲೆಂಟ್ ಸುನೀಲ್ ಹಾಗೂ ಫೈಟರ್ ರವಿ ಬಿಜೆಪಿಗೆ ಸೇರ್ಪಡೆಯಾಗುತ್ತಾರೆ ಎಂಬ ಸುದ್ದಿ ಭಾರಿ ಚರ್ಚೆಗೆ ಗ್ರಾಸವಾಗಿತ್ತು. ಅಲ್ಲದೇ ಸೈಲೆಂಟ್ ಸುನೀಲ್ ಪರ ಕೆಲ ಸಚಿವರೇ ಸಮರ್ಥನೆ ಮಾಡಿಕೊಂಡಿದ್ದರು. ವಿಪಕ್ಷ ಕಾಂಗ್ರೆಸ್ ಬಿಜೆಪಿ ಸರ್ಕಾರದ ವಿರುದ್ಧ ಹಿಗ್ಗಾ ಮುಗ್ಗಾ ವಾಗ್ದಾಳಿ ನಡೆಸಿತ್ತು. ಈ ಎಲ್ಲಾ ಬೆಳವಣಿಗೆಗಳ ಬೆನ್ನಲ್ಲೇ ಸೈಲೆಂಟ್ ಸುನೀಲ್ ಬಿಜೆಪಿ ಸೇರ್ಪಡೆಗೆ ಬ್ರೇಕ್ ಬಿದ್ದಿದೆ.
ರೌಡಿ ಶೀಟರ್ ಸೈಲೆಂಟ್ ಸುನೀಲ್ ನನ್ನು ಯಾವುದೇ ಕಾರಣಕ್ಕೂ ಪಕ್ಷಕ್ಕೆ ಸೇರಿಸಿಕೊಳ್ಳುವುದಿಲ್ಲ ಎಂದು ಬಿಜೆಪಿ ರಾಜ್ಯಾಧ್ಯಕ್ಷ ನಳೀನ್ ಕುಮಾರ್ ಕಟೀಲ್ ಸ್ಪಷ್ಟಪಡಿಸಿದ್ದಾರೆ. ಈ ಬಗ್ಗೆ ಮಾಧ್ಯಮ ಪ್ರಕಟಣೆ ಹೊರಡಿಸಿದ್ದಾರೆ.
ರೌಡಿಶೀಟರ್ ಗಳು ಬಿಜೆಪಿಗೆ ಸೇರ್ಪಡೆಯಾಗುತ್ತಾರೆ ಎಂಬ ಸುದ್ದಿ ಬೆನ್ನಲ್ಲೇ ಸರಣಿ ಟ್ವೀಟ್ ಮೂಲಕ ಕಿಡಿಕಾರಿದ್ದ ಕಾಂಗ್ರೆಸ್, ಬಿಜೆಪಿಯಲ್ಲಿ ಈ ಮೊದಲು ವೈಟ್ ಕಾಲರ್ ರೌಡಿಗಳಿದ್ದರು, ಈಗ ರಿಯಲ್ ರೌಡಿಗಳು ಸೇರಿದ್ದಾರೆ. ಮುಂದೆ ಭೂಗತ ಪಾತಕಿ ದಾವೂದ್ ಇಬ್ರಾಹಿಂ ಕೂಡ ಬಿಜೆಪಿ ಸೇರಿ ಪಾವನನಾಗಬಹುದು! ಪಾತಕಿಗಳು, ದರೋಡೆಕೋರರು, ಡ್ರಗ್ ಪೆಡ್ಲರ್‌ಗಳು, ಕ್ರೀಮಿನಲ್‌ಗಳು, ಭ್ರಷ್ಟರು, ರೇಪಿಸ್ಟರು ಎಲ್ಲರಿಗೂ ಬಿಜೆಪಿ ಪಕ್ಷ ತವರು ಮನೆ ಇದ್ದಂತೆ! ಎಂದು ವಾಗ್ದಾಳಿ ನಡೆಸಿತ್ತು. ಇದೀಗ ಸೈಲೆಂಟ್ ಸುನೀಲ್ ಬಿಜೆಪಿ ಸೇರ್ಪಡೆಗೆ ಸ್ವತ: ಬಿಜೆಪಿ ರಾಜ್ಯಾಧ್ಯಕ್ಷರೇ ಬ್ರೇಕ್ ಹಾಕಿದ್ದಾರೆ.
ಗಡಿ ವಿವಾದ: ಹಿರಿಯ ವಕೀಲ ಮುಕುಲ್ ರೋಹ್ಟಗಿ ಭೇಟಿಯಾದ ಸಿಎಂ
https://pragati.taskdun.com/karnataka-maharashtra-border-issueadvocate-mukul-rohatgicm-basavaraj-bommai/
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ