
ಪ್ರಗತಿವಾಹಿನಿ ಸುದ್ದಿ: ರೌಡಿಶೀಟರ್ ಶಿವಪ್ರಕಾಶ್ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಬಿಜೆಪಿ ಮಾಜಿ ಸಚಿವ ಬೈರತಿ ಬಸವರಾಜ್ ವಿರುದ್ಧ ಎಫ್ ಐ ಆರ್ ದಾಖಲಾಗಿದೆ.
ರೌಡಿಶೀಟರ್ ಶಿವಪ್ರಕಾಶ್ ತಾಯಿ ವಿಜಯಲಕ್ಷ್ಮೀ ನಿದಿದ ದೂರಿನ ಹಿನ್ನೆಲೆಯಲ್ಲಿ ಬೆಂಗಳೂರಿನ ಭಾರತಿ ನಗರ ಪೊಲೀಸ್ ಠಾಣೆಯಲ್ಲಿ ಬೈರತಿ ಬಸವರಾಜ್ ಸೇರಿದಂತೆ ಐವರ ವಿರುದ್ಧ ಪ್ರಕರಣ ದಾಖಲಾಗಿದೆ.
ಪ್ರಕರಣದಲ್ಲಿ ಮಾಜಿ ಸಚಿವ ಬೈರತಿ ಬಸವರಾಜ್ ಎ5 ಆರೋಪಿಯಾಗಿದ್ದಾರೆ. ಜಗದೀಶ್ ಎ1, ಕಿರಣ್ ಎ2, ವಿಮಲ್ ಎ 3, ಅನಿಲ್ ಎ4 ರೋಪಿಗಳಾಗಿದ್ದಾರೆ.
ಕಿತ್ತನೂರು ಜಾಗದ ವಿಚಾರವಾಗಿ ಗಲಾಟೆ ನಡೆದಿ ಶಿವಪ್ರಕಾಶ್ ಕೊಲೆ ನಡೆದಿದೆ. ಸ್ಕಾರ್ಪಿಯೋದಲ್ಲಿ 8-9 ಜನರು ಬಂದು ಶಿವಪ್ರಕಾಶ್ ಗೆ ಬೆದರಿಕೆ ಹಾಕಿದ್ದರು. ಅಲ್ಲದೇ ಬೈರತಿ ಬಸವರಾಜ್ ಹಾಗೂ ಜಗದೀಶ್ ಮತ್ತಿತರರು ನನಗೆ ಪ್ರಾಣ ಬೆದರಿಕೆ ಹಾಕುತ್ತಿದ್ದಾರೆ ಎಂದು ಹಲವು ಬಾರಿ ಮಗ ಹೇಳುತ್ತಿದ್ದ ಎಂದು ವಿಜಲಕ್ಷ್ಮೀ ದೂರಿನಲ್ಲಿ ಉಲ್ಲೇಖಿಸಿದ್ದಾರೆ. ಈ ಹಿನ್ನೆಲೆಯಲ್ಲಿ ಪ್ರಕರಣ ದಾಖಲಾಗಿದೆ.