
ಕಾರಾಗೃಹದ ಎಡಿಜಿಪಿ ದಯಾನಂದ್ ಎತ್ತಂಗಡಿ
ಪ್ರಗತಿವಾಹಿನಿ ಸುದ್ದಿ: ರಾಜ್ಯದ ಜೈಲುಗಳಲ್ಲಿ ಹಲವಾರು ಅವಾಂತರಗಳು ಪತ್ತೆಯಾಗುತ್ತೆಯಾಗುತ್ತಿರುವ ಹಿನ್ನೆಲೆಯಲ್ಲಿ ಕಾರಾಗೃಹದ ಎಡಿಜಿಪಿ ದಯಾನಂದ್ ಅವರನ್ನು ಬೇರೆ ಕಡೆ ಎತ್ತಂಗಡಿ ಮಾಡಲಾಗಿದೆ.
ಹಿರಿಯ ಪೊಲೀಸ್ ಅಧಿಕಾರಿ ಅಲೋಕ್ ಕುಮಾರ್ ಅವರನ್ನು ರಾಜ್ಯ ಸರ್ಕಾರ ವರ್ಗಾವಣೆ ಮಾಡಿದ್ದು ಕಾರಾಗೃಹ ಇಲಾಖೆಯ ಡಿಜಿಪಿಯಾಗಿ ಮುಂಬಡ್ತಿ ನೀಡಿದೆ. ಇನ್ನು ಕಾರಾಗೃಹದ ಎಡಿಜಿಪಿ ದಯಾನಂದ್ ಅವರನ್ನು ಎಡಿಜಿಪಿ ತರಬೇತಿ ವಿಭಾಗಕ್ಕೆ ವರ್ಗಾವಣೆ ಮಾಡಿ ಆದೇಶಿಸಲಾಗಿದೆ.
ಕಾರಗೃಹ ಇಲಾಖೆ ಡಿಜಿಪಿಯಾಗಿ ಅಲೋಕ್ ಕುಮಾರ್ ಅವರನ್ನು ನೇಮಕ ಮಾಡಲಾಗಿದೆ. ದಕ್ಷತೆಗೆ ಹೆಸರುವಾಸಿಯಾಗಿರುವ ಅಲೋಕ್ ಕುಮಾರ್ ಅವರ ವರ್ಗಾವಣೆಯ ಹಿನ್ನಲೆ ಜೈಲಿನಲ್ಲಿರುವ ಕ್ರಿಮಿನಲ್ ಗಳಿಗೆ ಈಗಾಗಲೇ ನಡುಕ ಶುರುವಾಗಿದೆ.
ಇತ್ತೀಚೆಗೆ ರಾಜ್ಯದ ಕಾರಾಗೃಹಗಳಲ್ಲಿ ಅಕ್ರಮ, ರಾಜಾತಿಥ್ಯ ಪ್ರಕರಣಗಳು, ಡ್ರಗ್ ಪತ್ತೆಯಾದ ಪ್ರಕರಣ, ಮೊಬೈಲ್ ಬಳಕೆಯ ಪ್ರಕರಣಗಳು ಬೆಳಕಿಗೆ ಬಂದ ಕಾರಣ ರಾಜ್ಯ ಸರ್ಕಾರಕ್ಕೆ ಮುಜುಗರ ಉಂಟಾಗಿತ್ತು.ಹೀಗಾಗಿ ಇದಕ್ಕೆ ಬ್ರೇಕ್ ಹಾಕಲು ಕಾರಾಗೃಹ ಇಲಾಖೆಯ ಡಿಜಿಪಿಯಾಗಿ ನೇಮಿಸಲಾಗಿದೆ.




