Belagavi NewsBelgaum NewsKarnataka NewsNationalPolitics

*ಅಪಘಾತದಲ್ಲಿ ಮೃತಪಟ್ಟ ಬಿಎಂಟಿಸಿಯ ನೌಕರರ ಕುಟುಂಬಕ್ಕೆ 1ರೂ. ಕೋಟಿ ಪರಿಹಾರ ವಿತರಣೆ*

ಪ್ರಗತಿವಾಹಿನಿ ಸುದ್ದಿ: ಅಪಘಾತದಲ್ಲಿ ಮೃತಪಟ್ಟ ಬಿಎಂಟಿಸಿಯ ನೌಕರರ ಕುಟುಂಬಕ್ಕೆ ₹1 ಕೋಟಿ ಪರಿಹಾರ ವಿಮೆಯನ್ನು ಸಾರಿಗೆ ಸಚಿವರಾದ ರಾಮಲಿಂಗಾರೆಡ್ಡಿ ಅವರು ವಿತರಿಸಿದ್ದಾರೆ. 

ಅಪಘಾತ ವಿಮೆ ₹1.5 ಕೋಟಿ ನೀಡುವ ಯೋಜನೆಗೆ ಸಂಬಂಧಿಸಿದಂತೆ ಬಿಎಂಟಿಸಿ ಮತ್ತು ಕೆನರಾ ಬ್ಯಾಂಕ್ ಮಧ್ಯೆ ಒಡಂಬಡಿಕೆ ಮಾಡಿಕೊಳ್ಳಲಾಗಿದೆ. ಅಪಘಾತದಲ್ಲಿ ನೌಕರರು ಮೃತಪಟ್ಟ ಪ್ರಕರಣಗಳಲ್ಲಿ ಅವರ ಕುಟುಂಬಕ್ಕೆ ವಿಮೆ ಭದ್ರತೆ ₹1 ಕೋಟಿ, ಸಂಸ್ಥೆಯಿಂದ ₹50 ಲಕ್ಷ ಪರಿಹಾರ ದೊರೆಯಲಿದೆ.

ಅಪಘಾತ ಹೊರತುಪಡಿಸಿ ಅನಾರೋಗ್ಯ, ಇನ್ನಿತರ ಕಾರಣದಿಂದ ಮೃತಪಟ್ಟ ಕುಟುಂಬಕ್ಕೆ ₹10 ಲಕ್ಷ ಪರಿಹಾರ ನೀಡಲಾಗಿದೆ. ಬಿಎಂಟಿಸಿಯಲ್ಲಿ ಜಾರಿಯಲ್ಲಿದ್ದ ಗುಂಪು ವಿಮಾ ಯೋಜನೆಯನ್ನು ಪರಿಷ್ಕರಿಸಿ 2024ರ ಫೆ.19ರಂದು ಜಾರಿ ಮಾಡಲಾಗಿತ್ತು. ಆ ನಂತರದ ಅವಧಿಯಲ್ಲಿ ಈವರೆಗೆ 86 ನೌಕರರು ಮೃತಪಟ್ಟಿದ್ದಾರೆ. ಪರಿಶೀಲನೆ ಹಂತದಲ್ಲಿ 31 ಪ್ರಕರಣಗಳಿದ್ದು, ಉಳಿದವರಿಗೆ ಪರಿಹಾರ ವಿಮೆ ನೀಡಲಾಗಿದೆ ಎಂದು ಸಚಿವರು ತಿಳಿಸಿದ್ದಾರೆ.

Home add -Advt

Related Articles

Back to top button