
ಪ್ರಗತಿವಾಹಿನಿ ಸುದ್ದಿ, ಬೆಳಗಾವಿ – ಹೆಚ್ಚುವರಿ ವೇತನ ಬಡ್ತಿ ಆದೇಶಕ್ಕಾಗಿ 2 ಸಾವಿರ ರೂ ಲಂಚ ಪಡೆಯುತ್ತಿದ್ದಾಗ ಆರೋಗ್ಯ ಇಲಾಖೆ ಪ್ರಥಮ ದರ್ಜೆ ಸಹಾಯಕನೋರ್ವ ಎಸಿಬಿ ಬಲೆಗೆ ಬಿದ್ದಿದ್ದಾನೆ.

ದಿನಾಂಕ 14.07.2022 ರಂದು ಆಪಾದಿತ ಬೀಮರಾವ್ ಈರಪ್ಪ ಮಾದರ, ಪ್ರಥಮ ದರ್ಜೆ ಸಹಾಯಕ, ವಿಭಾಗೀಯ ಸಹ ನಿರ್ದೇಶಕ ಕಚೇರಿ, ಆಡಳಿತಾಧಿಕಾಗಳು ವಿಭಾಗೀಯ ಸಹ ನಿರ್ದೇಶಕರ ಕಛೇರಿ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸೇವೆಗಳು, ಬೆಳಗಾವಿ ವಿಭಾಗ, ಬೆಳಗಾವಿ ಇವರು ಈ ದಿವಸ ಫಿಲ್ಯಾದಿಯಿಂದ ರೂ.2,000/-ಗಳ ಲಂಚದ ಹಣವನ್ನು ಪೋನ್-ಪೇ ಮುಖಾಂತರ ಸ್ವೀಕರಿಸಿದ್ದು, ಬೆಳಗಾವಿ ಭ್ರಷ್ಟಾಚಾರ ನಿಗ್ರಹ ದಳ ಅಧಿಕಾರಿಗಳು ನಡೆಸಿದ ಕಾರ್ಯಾಚರಣೆಯಲ್ಲಿ ಸಿಕ್ಕಿಬಿದ್ದಿದ್ದು, ನಂತರ ಆಪಾದಿತನ ಮೊಬೈಲ್ ಫೋನ್ ಅನ್ನು ಪಂಚರ ಸಮಕ್ಷಮ ಜಪ್ತ ಮಾಡಿಕೊಂಡಿದ್ದು, ತನಿಖೆ ಮುಂದುವರೆದಿರುತ್ತದೆ.
ಬಿ.ಎಸ್. ನೇಮಗೌಡ, ಪೊಲೀಸ್ ಅಧೀಕ್ಷಕರು, ಭ್ರಷ್ಟಾಚಾರ ನಿಗ್ರಹ ದಳ, ಉತ್ತರ ವಲಯ, ಬೆಳಗಾವಿ ರವರ ಮಾರ್ಗದರ್ಶನದಲ್ಲಿ ಪಿರ್ಯಾದಿಯವರು ಈ ಬಗ್ಗೆ ನೀಡಿದ ದೂರನ್ನು ಜೆ.ಎಮ್. ಕರುಣಾಕರ ಶೆಟ್ಟಿ, ಪೊಲೀಸ್ ಉಪಾಧೀಕ್ಷಕರವರು ದಾಖಲಿಸಿಕೊಂಡಿರುತ್ತಾರೆ. .ಎ.ಎಸ್.ಗೂದಿಗೊಪ್ಪ, ಪೊಲೀಸ್ ನಿರೀಕ್ಷಕರು ಹಾಗೂ ಬೆಳಗಾವಿ ಎಸಿಬಿ ಠಾಣೆಯ ಸಿಬ್ಬಂದಿ ಕಾರ್ಯಚರಣೆಯಲ್ಲಿ ಭಾಗವಹಿಸಿದ್ದರು.
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ