Kannada NewsKarnataka NewsLatest
*ಆರ್.ಎಸ್.ಎಸ್ ಕಚೇರಿಗೆ ನುಗ್ಗಿ ಹಲ್ಲೆ, ಬೆದರಿಕೆ: 20 ಜನರ ವಿರುದ್ಧ FIR ದಾಖಲು*

ಪ್ರಗತಿವಾಹಿನಿ ಸುದ್ದಿ: ಆರ್.ಎಸ್.ಎಸ್ ಪ್ರಧಾನ ಕಚೇರಿಗೆ ನುಗ್ಗಿ ಸಿಬ್ಬಂದಿಗಳ ಮೇಲೆ ಹಲ್ಲೆಗೆ ಯತ್ನಿಸಿ, ಜೀವ ಬೆದರಿಕೆ ಹಾಕಿರುವ ಪ್ರಕರಣ ಸಂಬಂಧ 20 ಜನರ ವಿರುದ್ಧ ಎಫ್ ಐ ಆರ್ ದಾಖಲಾಗಿದೆ.
ಬೆಂಗಳೂರಿನಲ್ಲಿರುವ ಆರ್.ಎಸ್.ಎಸ್ ಪ್ರಧಾನ ಕಚೇರಿ ಕೇಶವಕೃಪಾಗೆ ನುಗ್ಗಿ ಹಲ್ಲೆ ನಡೆಸಲು ಯತ್ನಿಸಿದ್ದಲ್ಲದೇ ಜೀವ ಬೆದರಿಕೆ ಹಾಕಲಾಗಿದೆ ಎಂದು ಕೇಶವಕೃಪಾ ಕಾರ್ಯದರ್ಶಿ ಶ್ರೀನಿಧಿ ನೀಡಿದ ದೂರಿನ ಹಿನ್ನೆಲೆಯಲ್ಲಿ ಎನ್ ಎಸ್ ಯುಐ ರಾಜ್ಯ ಘಟಕದ ಅಧ್ಯಕ್ಷ ಕಾರ್ತಿಕ್ ಹಾಗೂ ಇತರ 19 ಜನರ ವಿರುದ್ಧ ದೂರು ದಾಖಲಾಗಿದೆ.
ಅಕ್ರಮ ಪ್ರವೇಶ, ಹಲ್ಲೆ ಯತ್ನ, ಜೀವ ಬೆದರಿಕೆ ಆರೋಪದಡಿ ಎಫ್ ಐ ಆರ್ ದಾಖಲಾಗಿದೆ ಎಂದು ತಿಳಿದುಬಂದಿದೆ.