
ಪ್ರಗತಿವಾಹಿನಿ ಸುದ್ದಿ; ತಿರುವನಂತಪುರಂ: ಇಂದು ಮುಂಜಾನೆ ಆರ್ ಎಸ್ ಎಸ್ ಕಚೇರಿಯೊಂದರ ಮೇಲೆ ಬಾಂಬ್ ದಾಳಿ ನಡೆದಿರುವ ಘಟನೆ ಕೇರಳದ ಕಣ್ಣೂರಿನಲ್ಲಿ ನಡೆದಿದೆ.
ಕಣ್ನೂರು ಜಿಲ್ಲೆಯ ಪಯ್ಯನ್ನೂರಿನಲ್ಲಿರುವ ಆರ್ ಎಸ್ ಎಸ್ ಕಚೇರಿ ಮೇಲೆ ಬಾಂಬ್ ದಾಳಿ ನಡೆದಿದೆ. ಪೊಲೀಸರು ಸ್ಥಳಕ್ಕೆ ದೌಡಾಯಿಸಿ ಪರಿಶೀಲನೆ ನಡೆಸಿದ್ದಾರೆ.
ಬಾಂಬ್ ದಾಳಿಯಲ್ಲಿ ಆರ್ ಎಸ್ ಎಸ್ ಕಚೇರಿಯ ಕಿಟಕಿ ಗಾಜುಗಳು ಪುಡಿಯಾಗಿದ್ದು, ಪೀಠೋಪಕರಣಗಳು ಹಾನಿಯಾಗಿವೆ ಎಂದು ತಿಳಿದುಬಂದಿದೆ.
ಚಾರ್ಮಡಿ ಘಾಟ್ ನಲ್ಲಿ ಇದ್ದಕ್ಕಿದ್ದಂತೆ ಹೊತ್ತಿ ಉರಿದ ಕಾರು
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ