Latest

ರಾಜ್ಯದ ಆರ್.ಎಸ್.ಎಸ್ ಕಾರ್ಯಲಯದ ಮೇಲೆ ದಾಳಿ ಬೆದರಿಕೆ; ಆರೋಪಿ ಬಂಧನ

ಪ್ರಗತಿವಾಹಿನಿ ಸುದ್ದಿ; ಶಿವಮೊಗ್ಗ: ಆರ್.ಎಸ್.ಎಸ್.ಕಾರ್ಯಾಲಯದ ಮೇಲೆ ದಾಳಿ ನಡೆಸುವುದಾಗಿ ಬೆದರಿಕೆ ಸಂದೇಶ ರವಾನಿಸಿದ್ದ ಆರೋಪಿಯನ್ನು ಬಂಧಿಸಲಾಗಿದೆ ಎಂದು ಗೃಹ ಸಚಿವ ಅರಗ ಜ್ಞಾನೇಂದ್ರ ತಿಳಿಸಿದ್ದಾರೆ.

ಶಿವಮೊಗ್ಗದಲ್ಲಿ ಮಾತನಾಡಿದ ಗೃಹ ಸಚಿವ ಅರಗ ಜ್ಞಾನೇಂದ್ರ, ಬೆದರಿಕೆ ಹಾಕಿದ್ದ ವ್ಯಕ್ತಿಯನ್ನು ಸೆಂಥಿಲ್ ಎಂದು ಗುರುತಿಸಲಾಗಿದ್ದು, ಆತನನ್ನು ತಮಿಳುನಾಡಿನಲ್ಲಿ ಬಂಧಿಸಲಾಗಿದೆ. ಇಂತಹ ಬೆದರಿಕೆ ಕರೆ ಅಥವಾ ಸಂದೇಶ ರವಾನಿಸುವವರ ವಿರುದ್ಧ ಕಠಿಣ ಕಾನೂನು ಕ್ರಮ ಜರುಗಿಸಲಾಗುವುದು ಎಂದರು.

Related Articles

ಆರ್.ಎಸ್.ಎಸ್ ಕಾರ್ಯಾಲಯದ ಮೇಲೆ ದಾಳಿ ನಡೆಸುವುದಾಗಿ ಬೆದರಿಕೆ ಹಾಕಿರುವ ಹಿನ್ನೆಲೆಯಲ್ಲಿ ರಾಜ್ಯದ ಎಲ್ಲಾ ಕಾರ್ಯಾಲಯಗಳಿಗೂ ಪೊಲಿಸ್ ಭದ್ರತೆ ಒದಗಿಸಲಾಗುವುದು ಎಂದು ತಿಳಿಸಿದ್ದಾರೆ.

ಕರ್ನಾಟಕದ ನಾಲ್ಕು ಆರ್ ಎಸ್ ಎಸ್ ಕಾರ್ಯಾಲಯ ಹಾಗೂ ಉತ್ತರ ಪ್ರದೇಶದ ಎರಡು ಆರ್ ಎಸ್ ಎಸ್ ಕಾರ್ಯಾಲಯವನ್ನು ಧ್ವಂಸಗೊಳಿಸುವುದಾಗಿ ವ್ಯಕ್ತಿ ಬೆದರಿಕೆಯೊಡ್ಡಿದ್ದ ಎಂದು ತಿಳಿಸಿದರು.
ದಕ್ಷಿಣ ಭಾರತದ ಅತಿದೊಡ್ಡ ಸ್ಫಟಿಕಲಿಂಗವನ್ನೇ ಕದ್ದೊಯ್ದ ಕಳ್ಳರು

Home add -Advt

Related Articles

Back to top button