ಆರ್‌ಎಸ್‌ಎಸ್‌ ಮುಖ್ಯಸ್ಥರ ಹತ್ಯೆಗೆ ಸಂಚು ಖಂಡನೀಯ

ಪ್ರಗತಿವಾಹಿನಿ ಸುದ್ದಿ; ಬೆಂಗಳೂರು: ಆರ್‌ಎಸ್‌ಎಸ್‌ ಮುಖ್ಯಸ್ಥ ಮೋಹನ್ ಭಾಗವತ್ ಹತ್ಯೆಗೆ ಸಂಚು ರೂಪಿಸಿರುವುದು ಖಂಡನೀಯ. ಕೇಂದ್ರ ಸರ್ಕಾರ ಇಂತಹ ಕಿಡಿಗೇಡಿಗಳಿಗೆ ಆದಷ್ಟು ಬೇಗ ಕಡಿವಾಣ ಹಾಕಲಿದೆ ಎಂದು ಸಚಿವ ಡಿ.ವಿ ಸದಾನಂದ ಗೌಡ ತಿಳಿಸಿದ್ದಾರೆ.

ಸುದ್ದಿಗೋಷ್ಠಿಯಲ್ಲಿ ಮಾತಾಡಿದ ಡಿ.ವಿ ಸದಾನಂದ ಗೌಡ, ಉಗ್ರರ ಸಂಚು ಸತ್ಯವೂ ಆಗಿರಬಹುದು, ಸುಳ್ಳು ಆಗಿರಬಹುದು. ಆದರೆ, ಇಂತಹ ಹತ್ಯೆಗಳಿಗೆ ಅವಕಾಶ ಮಾಡಿಕೊಡದಂತೆ ರಾಜ್ಯ ಮತ್ತು ಕೇಂದ್ರ ಸರ್ಕಾರ ಎಲ್ಲಾ ರೀತಿಯ ಮುನ್ನೆಚ್ಚರಿಕಾ ಕ್ರಮಗಳನ್ನು ತೆಗೆದುಕೊಳ್ಳಲಿದೆ ಎಂದರು.

ಬಸವನಗುಡಿಯ ನ್ಯಾಷನಲ್ ಕಾಲೇಜು ಮೈದಾನದಲ್ಲಿ ಆರ್​ಎಸ್​ಎಸ್​ ಕಾರ್ಯಕರ್ತರ ಸಮಾವೇಶ ಆಯೋಜಿಸಲಾಗಿತ್ತು. ಈ ಕಾರ್ಯಕ್ರಮದ ಮೇಲೆ ಉಗ್ರರು ಕಣ್ಣಿಟ್ಟಿದ್ದರು ಎಂಬ ಮಾಹಿತಿಯನ್ನು ಕೇಂದ್ರ ಗುಪ್ತದಳ ಇಲಾಖೆ ಪೊಲೀಸರಿಗೆ ನೀಡಿತ್ತು.

ಅಲ್ಲದೇ ಮೋಹನ್​​ ಭಾಗವತ್​ ಹತ್ಯೆ ಮಾಡಲು ನಾಗಪುರದ ಆರ್​ಎಸ್​ಎಸ್​ ಕಚೇರಿ ಮೇಲೆ ದಾಳಿ ನಡೆಸಬೇಕೆಂದು ಸಂಚು ರೂಪಿಸಿದ್ದಾರೆ ಎಂಬ ಮಾಹಿತಿಯೂ ಗ್ಲೋಬಲ್ ಟೆರರಿಸ್ಟ್ ಗ್ರೂಪ್‌ನಲ್ಲಿ ಹರಿದಾಡುತ್ತಿದೆ ಎಂದು ಖುದ್ದು ಕೇಂದ್ರ ಗುಪ್ತದಳದ ಅಧಿಕಾರಿಗಳು ರಾಜ್ಯದ ಪೊಲೀಸರಿಗೆ ಎಚ್ಚರಿಕಾ ಸಂದೇಶ ರವಾನಿಸಿದ್ದಾರೆ.

Home add -Advt

ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ

Related Articles

Back to top button