ಆರ್ ಎಸ್ ಎಸ್ ಮುಖಂಡ ಮೋಹನ್ ಭಾಗವತ್ ಹತ್ಯೆಗೆ ಉಗ್ರರ ಸ್ಕೆಚ್

ಪ್ರಗತಿವಾಹಿನಿ ಸುದ್ದಿ; ಬೆಂಗಳೂರು: ಬಸವನಗುಡಿ ನ್ಯಾಷನಲ್ ಕಾಲೇಜು ಮೈದಾನದಲ್ಲಿ ನಡೆದಿದ್ದ ಆರ್​​ಎಸ್​ಎಸ್​ ಕಾರ್ಯಕರ್ತರ ಸಮಾವೇಶದಲ್ಲಿ ಆರ್​ಎಸ್​ಎಸ್​ ಮುಖ್ಯಸ್ಥ ಮೋಹನ್ ಭಾಗವತ್ ಹತ್ಯೆಗೆ ಉಗ್ರರು ಸಂಚು ರೂಪಿಸಿದ್ದರು ಎಂಬ ಆಘಾತಕಾರಿ ಮಾಹಿತಿಯನ್ನು ಕೇಂದ್ರ ಗುಪ್ತಚರ ಇಲಾಖೆ ಮಾಹಿತಿ ನೀಡಿದೆ.

ಗುಪ್ತಚರ ಇಲಾಖೆ ಮಾಹಿತಿ ಹಿನ್ನಲೆಯಲ್ಲಿ ಆರ್​ಎಸ್​ಎಸ್​ ಮುಖ್ಯಸ್ಥ ಮೋಹನ್ ಭಾಗವತ್ ನೇತೃತ್ವದಲ್ಲಿ ನಡೆದ ಸಮಾವೇಶಕ್ಕೆ ಭಾರಿ ಭದ್ರತೆ ಒದಗಿಸಲಾಗಿತ್ತು. ಈ ಹಿನ್ನೆಲೆಯಲ್ಲಿ ನಗರದ ಹಲವು ಭಾಗಗಳಲ್ಲಿ ಕಟ್ಟೆಚ್ಚರ ವಹಿಸಲಾಗಿತ್ತು. ಇಂದು ಕೂಡ ಬೆಂಗಳೂರಿನ ಪ್ರಮುಖ ಭಾಗಗಳಲ್ಲಿ ಕಟ್ಟೆಚ್ಚರ ವಹಿಸಲಾಗಿದೆ.

ಆರ್​​ಎಸ್​ಎಸ್​ ಕಾರ್ಯಕರ್ತರ ಸಮಾವೇಶದ ವೇಳೆ ಉಗ್ರರು ದಾಳಿ ನಡೆಸುವ ಬಗ್ಗೆ ಜಾಗತಿಕ ಭಯೋತ್ಪಾದನಾ ಸಂಘಟನೆಗಳ ನಡುವೆ ಚರ್ಚೆ ನಡೆದಿದೆ ಎಂದು ಕೇಂದ್ರ ಗುಪ್ತಚರ ಇಲಾಖೆ ಐಎಸ್​ಡಿಗೆ ಮಾಹಿತಿ ನೀಡಿತ್ತು. ಈ ಹಿನ್ನೆಲೆಯಲ್ಲಿ ಐಎಸ್​ಡಿ ಅಧಿಕಾರಿಗಳು ಕೂಡಲೇ ಎಚ್ಚೆತ್ತುಕೊಂಡು ಬೆಂಗಳೂರಿನಲ್ಲಿ ತೀವ್ರ ನಿಗಾ ವಹಿಸಿದ್ದರು.

ಸಮಾವೇಶದಲ್ಲಿ ಭಾಗವಹಿಸಿದ್ದ ಮೋಹನ್ ಭಾಗವತ್ ಕಾರ್ಯಕ್ರಮಕ್ಕೆ ಪೊಲೀಸರಿಂದ ಹೆಚ್ಚುವರಿ ಭದ್ರತೆ ಒದಗಿಸಲಾಗಿತ್ತಲ್ಲದೇ ಡಿಜೆ ಹಳ್ಳಿ, ಕೆಜಿ ಹಳ್ಳಿ, ಶಿವಾಜಿನಗರ, ಯಾರಬ್ ನಗರ, ಫ್ರೇಜರ್ ಟೌನ್, ಚಾಮರಾಜಪೇಟೆ, ಮೈಸೂರು ರಸ್ತೆ, ಇಲಿಯಾಸ್ ನಗರ, ಗುರಪ್ಪನಪಾಳ್ಯ ಸೇರಿದಂತೆ 10 ಸ್ಥಳಗಳಲ್ಲಿ ಪೊಲೀಸರಿಂದ ನಿಗಾ ವಹಿಸಲಾಗಿತ್ತು.

ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ

Related Articles

Back to top button