Latest

*ಆರ್ ಎಸ್ ಎಸ್ ಕಚೇರಿಗೆ ಭೇಟಿ; ಹಂಗಾಮಿ ಸಿಎಂ ಬೊಮ್ಮಾಯಿ ಮಹತ್ವದ ಚರ್ಚೆ*

ಫಲಿತಾಂಶದ ಬಳಿಕ ಪಕ್ಷ ಸಂಘಟನೆಗೆ ಒತ್ತು ನೀಡಿದ ಬೊಮ್ಮಾಯಿ‌

ಪ್ರಗತಿವಾಹಿನಿ ಸುದ್ದಿ; ಬೆಂಗಳೂರು: ಚುನಾವಣೆಯ ಫಲಿತಾಂಶದ ಬಳಿಕ ಹಂಗಾಮಿ ಸಿಎಂ ಬಸವರಾಜ ಬೊಮ್ಮಾಯಿ‌ ಅವರು ಆರ್ ಎಸ್ ಎಸ್ ನಾಯಕರೊಂದಿಗೆ ಪಕ್ಷ ಸಂಘಟನೆ ಬಗ್ಗೆ ಚರ್ಚೆ ನಡೆಸಿದರು.

ಇಂದು ಬೆಂಗಳೂರಿನ ಚಾಮರಾಜಪೇಟೆಯಲ್ಲಿರುವ ಕೇಶವ ಕೃಪಕ್ಕೆ ಭೇಟಿ ನಂತರ ಮಾಧ್ಯಮದವರೊಂದಿಗೆ ಅವರು ಮಾತನಾಡಿದರು.

Home add -Advt

ಇಂದು ಆರ್ ಎಸ್ ಎಸ್ ಮುಖಂಡರೊಂದಿಗೆ ಚುನಾವಣೆ ಫಲಿತಾಂಶದ ಬಗ್ಗೆ ಚರ್ಚೆ ಮಾಡಿದ್ದೇವೆ. ಬರುವಂತಹ ದಿನಗಳಲ್ಲಿ ಪಕ್ಷವನ್ನು ಮುಂದೆ ಹೇಗೆ ಸಂಘಟಿಸಬೇಕು ಎಂಬುದರ ಬಗ್ಗೆ ಚರ್ಚೆ ಆಗಿದೆ.‌

ರಾಜ್ಯಾಧಕ್ಷರು, ವರಿಷ್ಠರ ಜೊತೆಗೆ ಹಲವಾರು ಬಾರಿ ಚರ್ಚಿಸಿ ಭಾರತೀಯ ಜನತಾ ಪಕ್ಷವನ್ನು ಹೇಗೆ ಸಂಘಟನೆ ಮಾಡಬೇಕು ಎನ್ನುವ ತೀರ್ಮಾನ ಮಾಡುತ್ತೇವೆ ಎಂದರು.

ಚುನಾವಣೆಯಲ್ಲಿ ಗೆಲುವು ಸಾಧಿಸಿದ ಶಾಸಕರ ಸಭೆಯನ್ನು ಕರೆದಿಲ್ಲ. ಶಾಸಕರ ಸಭೆಯನ್ನು ರಾಜ್ಯಾಧಕ್ಷರು ಕರೆಯಲಿದ್ದಾರೆ ಎಂದರು.

https://pragati.taskdun.com/siddaramaiahdelhimallikarjuna-khargemeeting/

Related Articles

Back to top button