Kannada NewsKarnataka NewsLatest

ಗೋಕಾಕ ನಗರಕ್ಕೆ ಆರ್.ಟಿ.ಪಿ.ಸಿ.ಆರ್ ಪ್ರಯೋಗಾಲಯ ಮಂಜೂರು -ಈರಣ್ಣ ಕಡಾಡಿ

 ಸಂಸದ ಈರಣ್ಣ ಕಡಾಡಿ  ಮನವಿಗೆ ಸ್ಪಂದನೆ

ಪ್ರಗತಿವಾಹಿನಿ ಸುದ್ದಿ, ಮೂಡಲಗಿ: ರಾಷ್ಟ್ರೀಯ ಆರೋಗ್ಯ ಅಭಿಯಾನ ಯೋಜನೆಯಡಿ ಕೋವಿಡ್-೧೯ ಪರೀಕ್ಷೆ ಕೈಗೊಳ್ಳಲು ಗೋಕಾಕ ಸಾರ್ವಜನಿಕ ಆಸ್ಪತ್ರೆಯಲ್ಲಿ ಆರ್.ಟಿ.ಪಿ.ಸಿ.ಆರ್ ಪ್ರಯೋಗಾಲಯ ಮಂಜೂರಾಗಿದೆ ಎಂದು ರಾಜ್ಯಸಭಾ ಸದಸ್ಯ ಈರಣ್ಣ ಕಡಾಡಿ  ತಿಳಿಸಿದ್ದಾರೆ.

ಮಂಗಳವಾರ ಜ.೨೫ ರಂದು ಪತ್ರಿಕಾ ಹೇಳಿಕೆ ನೀಡಿದ ಸಂಸದ ಈರಣ್ಣ ಕಡಾಡಿ ಅವರು, ಸುಮಾರು ೫೩ ಲಕ್ಷ ಜನಸಂಖ್ಯೆ ಹೊಂದಿರುವ ಬೆಳಗಾವಿ ಜಿಲ್ಲೆಯಲ್ಲಿ ಕೋವಿಡ್ ಆರ್.ಟಿ.ಪಿ.ಸಿ.ಆರ್ ಪರೀಕ್ಷಾ ಕೇಂದ್ರಗಳ ಕೊರತೆಯಿಂದಾಗಿ ಸಾರ್ವಜನಿಕರು ಪರದಾಡುವಂತಾಗಿದೆ. ಆ ಕಾರಣದಿಂದ ಜಿಲ್ಲಾ ಕೇಂದ್ರದಿಂದ ಸುಮಾರು ೧೦೦ ಕಿ.ಮೀ ಅಂತರದಲ್ಲಿರುವ ಗೋಕಾಕ ಸಾರ್ವಜನಿಕ ಆಸ್ಪತ್ರೆಯಲ್ಲಿ ಕೋವಿಡ್ ಆರ್.ಟಿ.ಪಿ.ಸಿ.ಆರ್ ಪರೀಕ್ಷಾ ಕೇಂದ್ರ ಪ್ರಾರಂಭಿಸುವಂತೆ ಹಲವಾರು ಬಾರಿ ಅಂದಿನ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರನ್ನು  ಒತ್ತಾಯ ಮಾಡಲಾಗಿತ್ತು.

ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹಾಗೂ ಆರೋಗ್ಯ ಸಚಿವ ಡಾ. ಕೆ.ಸುಧಾಕರ ಇವರುಗಳ ನೇತೃತ್ವದಲ್ಲಿ ಬೆಳಗಾವಿಯ ಸುರ್ವರ್ಣ ಸೌಧದಲ್ಲಿ ಜರುಗಿದ ಕೋವಿಡ್ ನಿಯಂತ್ರಣ ಮತ್ತು ಪರಿಶೀಲನಾ ಸಭೆಯಲ್ಲಿ  ಸಹ ಒತ್ತಾಯಿಸಲಾಗಿತ್ತು. ಸಭೆ ಮುಗಿದ ನಂತರ ಅಂದು ನಡೆದ ಪತ್ರಿಕಾಗೋಷ್ಠಿಯಲ್ಲಿ  ಮುಖ್ಯಮಂತ್ರಿಗಳು ಭೌಗೋಳಿಕವಾಗಿ ಬೆಳಗಾವಿ ಜಿಲ್ಲೆ ಬಹಳ ದೊಡ್ಡದಾದ ಕಾರಣ ಹಾಗೂ ಅತಿ ಹೆಚ್ಚು ಜನಸಂಖ್ಯೆ ಹೊಂದಿರುವ ಕಾರಣ ಕೋವಿಡ್ ಪರೀಕ್ಷಾ ಫಲಿತಾಂಶಗಳು ಸಾರ್ವಜನಿಕರಿಗೆ ವಿಳಂಬವಾಗಿ ತಲುಪುತ್ತಿರುವ ಕಾರಣದಿಂದ ತುಂಬಾ ತೊಂದರೆಯಾಗುತ್ತಿದೆ. ಆದ ಕಾರಣ ಗೋಕಾಕ ಸಾರ್ವಜನಿಕ ಆಸ್ಪತ್ರೆಯಲ್ಲಿ ಅತಿ ಶೀಘ್ರದಲ್ಲಿ ಕೋವಿಡ್ ಆರ್.ಟಿ.ಪಿ.ಸಿ.ಆರ್ ಪರೀಕ್ಷಾ ಕೇಂದ್ರ ಪ್ರಾರಂಭಿಸುವುದಾಗಿ ಘೋಷಣೆ ಮಾಡಿದ್ದರು.
ಅದರಂತೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹಾಗೂ ಆರೋಗ್ಯ ಸಚಿವ ಡಾ. ಕೆ. ಸುಧಾಕರ ಅವರು ತಕ್ಷಣ ಕ್ರಮವನ್ನು ತೆಗೆದುಕೊಂಡು ಆರ್ ಟಿಪಿಸಿಆರ್ ಕೇಂದ್ರ ಆರಂಭಿಸಲು ಒಪ್ಪಿದ್ದು, ಅಗತ್ಯ ಜಾಗ ಒದಗಿಸುವಂತೆ ಜಿಲ್ಲಾಡಳಿತಕ್ಕೆ ಸೂಚಿಸಲಾಗಿದೆ ಎಂದು ಈರಣ್ಣ ಕಡಾಡಿ ತಿಳಿಸಿದರು.

ಬೆಳಗಾವಿಯಲ್ಲಿ ಮತ್ತೊಮ್ಮೆ ಕೊರೋನಾ ಸ್ಫೋಟ: ನಾಲ್ವರ ಬಲಿ; ಬೆಳಗಾವಿ ಜಿಲ್ಲೆಯ 3ನೇ ಅಲೆಯ ಸಮಗ್ರ ಮಾಹಿತಿ ಇಲ್ಲಿದೆ

ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ

Related Articles

Back to top button