*ರುದ್ರಣ್ಣ ಆತ್ಮಹತ್ಯೆ ಕೇಸ್: ಆರೋಪಿಗಳಿಗೆ ನಿರೀಕ್ಷಣಾ ಜಾಮೀನು*
ಪ್ರಗತಿವಾಹಿನಿ ಸುದ್ದಿ, ಬೆಳಗಾವಿ: ತಹಶೀಲ್ದಾರ ಕಚೇರಿಯಲ್ಲಿ ಆತ್ಮಹತ್ಯೆ ಮಾಡಿಕೊಂಡಿದ್ದ ಎಸ್‌ಡಿಎ ರುದ್ರಣ್ಣ ಯಡವಣ್ಣವರ ಅವರ ಪ್ರಕರಣಕ್ಕೆ ಸಂಬಂಧಿಸಿದಂತೆ ಮೂವರು ಆರೋಪಿಗಳಿಗೆ ಕೋರ್ಟ್ ನಿರೀಕ್ಷಣಾ ಜಾಮೀನು ಮಂಜೂರು ಮಾಡಿದೆ.
ನ.5 ರಂದು ರುದ್ರಣ್ಣ ಆತ್ಮಹತ್ಯೆ ಮಾಡಿಕೊಳ್ಳುವ ಮುಂಚೆ ವಾಟ್ಸ್ ಆಫ್ ನಲ್ಲಿ ನನ್ನ ಸಾವಿಗೆ ಸೋಮು, ತಹಶೀಲ್ದಾರ ಬಸವರಾಜ ನಾಗರಾಳ, ಅಶೋಕ ಕಬ್ಬಲಿಗೇರ ಕಾರಣ ಎಂದು ಸಂದೇಶ ಕಳುಹಿಸಿದ್ದರು. ಹಾಗಾಗಿ ರುದ್ರಣ್ಣ ತಾಯಿ ಖಡೇಬಜಾರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದರು.
ದೂರು ದಾಖಲಾಗುತ್ತಿದ್ದಂತೆ ಮೂವರು ಆರೋಪಿಗಳೂ ನಾಪತ್ತೆ ಆಗಿದ್ದರು. ಬಳಿಕ ಆರೋಪಿಗಳು ನಿರೀಕ್ಷಣಾ ಜಾಮೀನಿಗೆ ಅರ್ಜಿ ಸಲ್ಲಿಸಿದ್ದರು. ಸೋಮು, ತಹಶೀಲ್ದಾರ ಬಸವರಾಜ ನಾಗರಾಳ, ತಹಶೀಲ್ದಾರ್ ಕಚೇರಿಯ ಎಫ್‌ಡಿಎ ಅಶೋಕ ಕಬ್ಬಲಿಗೇರಗೆ ನಿರೀಕ್ಷಣಾ ಜಾಮೀನು ಮಂಜೂರು ಮಾಡಿ ಬೆಳಗಾವಿ 10ನೇ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ ಆದೇಶ ಹೊರಡಿಸಿದೆ.
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ