Kannada NewsKarnataka NewsLatest

*ಡೆಪ್ಯೂಟಿ ಸ್ಪೀಕರ್ ರುದ್ರಪ್ಪ ಲಮಾಣಿ ಎಸ್ಕಾರ್ಟ್ ವಾಹನ-ಬಸ್ ಭೀಕರ ಅಪಘಾತ: ಚಾಲಕನ ವಿರುದ್ಧ ಎಫ್ ಐ ಆರ್ ದಾಖಲು*

ಪ್ರಗತಿವಾಹಿನಿ ಸುದ್ದಿ: ಡೆಪ್ಯೂಟಿ ಸ್ಪೀಕರ್ ರುದ್ರಪ್ಪ ಲಮಾಣಿ ಅವರ ಎಸ್ಕಾರ್ಟ್ ವಾಹನ ಹಾಗೂ ಬಸ್ ನಡುವೆ ಅಪಘಾತ ಸಂಭವಿಸಿದ್ದು, ಚಾಲಕನ ವಿರುದ್ಧ ಪ್ರಕರಣ ದಾಖಲಾಗಿದೆ.

Home add -Advt

ಹಾವೇರಿ ಜಿಲ್ಲೆಯ ಹಳೇ ಪಿ.ಬಿ ರಸ್ತೆಯಲ್ಲಿ ರುದ್ರಪ್ಪ ಲಮಾಣಿ ಅವರ ಎಸ್ಕಾರ್ಟ್ ವಾಹನ ಹಾಗೂ ಕೆ.ಎಸ್.ಆರ್.ಟಿ.ಸಿ ಬಸ್ ಡಿಕ್ಕಿ ಹೊಡೆದಿದ್ದು, ಎಸ್ಕಾರ್ಟ್ ವಾಹನ ಚಾಲಕನ ನಿರ್ಲಕ್ಷವೇ ಅಪಘಾತಕ್ಕೆ ಕಾರಣ ಎನ್ನಲಾಗಿದೆ. ಈ ಹಿನ್ನೆಲೆಯಲ್ಲಿ ಹಾವೇರಿ ಸಂಚಾರಿ ಠಾಣೆಯಲ್ಲಿ ಎಫ್ ಐ ಆರ್ ದಾಖಲಾಗಿದೆ

ಹಳೆ ಪಿ.ಬಿ ರಸ್ತೆಯಲ್ಲಿ ವಾಲ್ಮೀಕಿ ವೃತ್ತದಿಂದ ಹೊಸಮನಿ ಸಿದ್ದಪ್ಪ ವೃತ್ತದ ಕಡೆ ಹೋಗುವ ದಾರಿಯಲ್ಲಿ ಎರಡು ದಿನಗಳ ಹಿಂದೆ ಈ ಅಪಘಾತ ಸಂಭವಿಸಿದೆ. ಅತಿ ವೇಗ ಹಾಗೂ ನಿರ್ಲಕ್ಷವೇ ಅಪಘಾತಕ್ಕೆ ಕಾರಣ ಎನ್ನಲಾಗಿದೆ.


Related Articles

Back to top button