
ಪ್ರಗತಿವಾಹಿನಿ ಸುದ್ದಿ: ಚಿತ್ರದುರ್ಗದಲ್ಲಿ ಅಪಘಾತಕ್ಕೀದಾಗಿ ಗಂಭೀರವಾಗಿ ಗಾಯಗೊಂಡಿದ್ದ ಡೆಪ್ಯೂಟಿ ಸ್ಪೀಕರ್ ರುದ್ರಪ್ಪ ಲಮಾಣಿ ಅವರನ್ನು ದಿಢೀರ್ ಬೆಂಗಳೂರು ಆಸ್ಪತ್ರೆಗೆ ಶಿಫ್ಟ್ ಮಡಲಾಗಿದೆ.
ರುದ್ರಪ್ಪ ಲಮಾಣಿ ಅವರಿಗೆ ಚಿತ್ರದುರ್ಗ ಜಿಲ್ಲೆಯ ಹಿರಿಯೂರು ತಾಲೂಕಿನ ಜೆ.ಜೆ.ಹಳ್ಳಿ ಬಳಿ ಅಪಘಾತವಾಗಿತ್ತು. ಗಂಭೀರವಾಗಿ ಗಾಯಗೊಂಡಿದ್ದ ಅವರನ್ನು ದಾವಣಗೆರೆಯ ಎಸ್.ಎಸ್.ಆಸ್ಪತ್ತ್ರೆಗೆ ದಾಖಲಿಸಲಾಗಿತ್ತು. ಆದರೆ ಈಗ ಹೆಚ್ಚಿನ ಚಿಕಿತ್ಸೆಗೆ ಬೆಂಗಳೂರಿನ ಅಪೋಲೋ ಆಸ್ಪತ್ರೆಗೆ ಶಿಫ್ಟ್ ಮಾಡಲಾಗಿದೆ.
ಇದರಿಂದಾಗಿ ಸಹಜವಾಗಿಯೇ ಬೆಂಬಲಿಗರು ಆತಂಕಗೊಂಡಿದ್ದಾರೆ. ನಿನ್ನೆ ರುದ್ರಪ್ಪ ಲಮಾಣಿ ಚಿತ್ರದುರ್ಗದ ಜೆ.ಜೆ.ಹಳ್ಳಿ ಬಳಿ ಕಾರು ನಿಲ್ಲಿಸಿ ಎಳನೀರು ಕುಡಿಯಲೆಂದು ಕಾರಿನಿಂದ ಇಳಿಯುತ್ತಿದ್ದಂತೆ ವೇಗವಾಗಿ ಬಂದ ಬೈಕ್ ರುದ್ರಪ್ಪ ಲಮಾಣಿಗೆ ಡಿಕ್ಕಿಹೊಡೆದಿದೆ. ಪರಿಣಾಮ ಗಂಭೀರವಾಗಿ ಗಾಯಗೊಂಡು ಸ್ಥಳದಲ್ಲೇ ಕುಸಿದು ಬಿದ್ದಿದ್ದರು. ತಕ್ಷಣ ಅವರನ್ನು ದಾವಣಗೆರೆ ಆಸ್ಪತ್ರೆಗೆ ದಾಖಲಿಸಿ ಐಸಿಯುನಲ್ಲಿ ಚಿಕಿತ್ಸೆ ಕೊಡಲಾಗಿತ್ತು. ಈಗ ಏಕಾಏಕಿ ಬೆಂಗಳೂರು ಆಸ್ಪತ್ರೆಗೆ ಸ್ಥಳಾಂತರಿಸಲಾಗಿದೆ.