Film & EntertainmentKarnataka NewsLatest

*ನಟಿ ರುಕ್ಮಿಣಿ ವಸಂತ್ ಬಿಕಿನಿ ಫೋಟೋ ವೈರಲ್ ಕೇಸ್: ಕಿಡಿಗೇಡಿಗಳ ವಿರುದ್ಧ FIR ದಾಖಲು*

ಪ್ರಗತಿವಾಹಿನಿ ಸುದ್ದಿ: ಕಾಂತಾರ ಸಿನಿಮಾದ ಕನಕವತಿ ಖ್ಯಾತಿಯ ನಟಿ ರುಕ್ಮಿಣಿ ವಸಂತ್‌ ಅವರ ನಕಲಿ ಬಿಕಿನಿ ಫೋಟೋ ವೈರಲ್ ಪ್ರಕರಣ ಸಂಬಂಧ ಕಿಡಿಗೇಡಿಗಳ ವಿರುದ್ಧ ಎಫ್ ಐ ಆರ್ ದಾಖಲಾಗಿದೆ.

ರುಕ್ಮಿಣಿ ವಸಂತ್‌ ನೀಡಿದ ದೂರಿನ ಹಿನ್ನೆಲೆಯಲ್ಲಿ ಸೈಬರ್ ಕ್ರೈಮ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ದೂರಿನಲ್ಲಿ ಎಐ (AI) ತಂತ್ರಜ್ಞಾನ ಬಳಸಿ ನನ್ನ ಫೋಟೋವನ್ನು ಬಿಕಿನಿ ರೀತಿ ಸೃಷ್ಟಿ ಮಾಡಿದ್ದಾರೆ. ಡೀಪ್‌ಫೇಕ್ ತಂತ್ರಜ್ಞಾನ ಬಳಸಿ ಬೇರೆಯೊಬ್ಬರ ದೇಹಕ್ಕೆ ನನ್ನ ಮುಖವನ್ನು ಬಳಸಿದ್ದಾರೆ. ಈ ರೀತಿ ನಕಲಿ ವಿಡಿಯೋ ಮತ್ತು ಪೊಟೊವನ್ನು ಸೃಷ್ಟಿ ಮಾಡಿದ್ದಾರೆ. ನನ್ನ ಗೌರವಕ್ಕೆ ಧಕ್ಕೆ ತರುವ ಕೆಲಸ ಮಾಡಿದ್ದಾರೆ ಎಂದು ಉಲ್ಲೇಖಿಸಿದ್ದರು.

Home add -Advt

ರುಕ್ಮುಣಿ ವಸಂತ್, 29 ಸಾಮಾಜಿಕ ಸೋಶಿಯಲ್‌ ಮೀಡಿಯಾ ಅಕೌಂಟ್ ವಿರುದ್ಧ ದೂರು ನೀಡಿದ್ದರು. 9 ಇನ್ಸ್ಟಾಗ್ರಾಂ ಅಕೌಂಟ್ , 14 ಎಕ್ಸ್‌ ಖಾತೆ, 6 ಫೇಸ್ ಬುಕ್ ಅಕೌಂಟ್‌ಗಳ ವಿರುದ್ಧ ಕ್ರಮ ಕೈಗೊಳ್ಳುವಂತೆ ದೂರು ದಾಖಲಾಗಿತ್ತು. ಇದೀಗ ಐಟಿ ಕಾಯ್ದೆ ಹಾಗೂ ಬಿಎನ್‌ಎಸ್‌ ಸೆಕ್ಷನ್‌ಗಳ ಅಡಿಯಲ್ಲಿ ಎಫ್‌ಐಆರ್‌ ದಾಖಲಿಸಿಕೊಂಡು ತನಿಖೆ ನಡೆಸುತ್ತಿದ್ದಾರೆ.

Related Articles

Back to top button