*ಎರಡು ಕಡೆ ಮಟಕಾ ಅಡ್ಡೆಗಳ ಮೇಲೆ ಗ್ರಾಮೀಣ ಪೊಲೀಸರ ದಾಳಿ*:*ಇಬ್ಬರು ಆರೋಪಿಗಳ ಬಂಧನ*

ಪ್ರಗತಿವಾಹಿನಿ ಸುದ್ದಿ, ಬೆಳಗಾವಿ: ಬೆಳಗಾವಿ ಗ್ರಾಮೀಣ ಪೊಲೀಸ್ ಠಾಣೆ ವ್ಯಾಪ್ತಿಯ ಯಳ್ಳೂರ ಹಾಗೂ ಹಿಂಡಲಗಾ ಗ್ರಾಮಗಳಲ್ಲಿ ನಡೆಯುತ್ತಿದ್ದ ಅಕ್ರಮ ಮಟಕಾ ಜೂಜಾಟದ ಅಡ್ಡೆಗಳ ಮೇಲೆ ಪೊಲೀಸರು ದಾಳಿ ನಡೆಸಿ ಇಬ್ಬರು ಆರೋಪಿಗಳನ್ನು ಬಂಧಿಸಿದ್ದಾರೆ.
ಯಳ್ಳೂರ ಗ್ರಾಮದಲ್ಲಿ ದಾಳಿ ನಡೆಸಿದ ವೇಳೆ ಮಟಕಾ ಜೂಜಾಟದಲ್ಲಿ ತೊಡಗಿದ್ದ ನಾಗೇಶ ಮಾರುತಿ ಬೋಗಲೆ (36) ಎಂಬಾತನನ್ನು ಬಂಧಿಸಲಾಗಿದ್ದು, ಆತನಿಂದ ₹3,580 ನಗದು ಹಾಗೂ ಮಟಕಾ ಚೀಟಿಗಳನ್ನು ವಶಪಡಿಸಿಕೊಳ್ಳಲಾಗಿದೆ.
ಜೊತೆಗೆ ಹಿಂಡಲಗಾ ಗ್ರಾಮದ ಸಾರ್ವಜನಿಕ ಸ್ಥಳದಲ್ಲಿ ನಡೆಯುತ್ತಿದ್ದ ಮಟಕಾ ದಂಧೆ ಮೇಲೂ ಪೊಲೀಸರು ದಾಳಿ ನಡೆಸಿದ್ದು, ಸಿಂಧಿ ಕಾಲೋನಿ ನಿವಾಸಿ ಶ್ಯಾಮ ಬಾಬಾರಾವ್ ಗುಲಬಾನಿ (50) ಎಂಬಾತನನ್ನು ವಶಕ್ಕೆ ಪಡೆದಿದ್ದಾರೆ. ಆರೋಪಿಯಿಂದ ₹4,120 ನಗದು ಹಾಗೂ ಮಟಕಾ ಸಾಮಗ್ರಿಗಳನ್ನು ಜಪ್ತಿ ಮಾಡಲಾಗಿದೆ.
ಎರಡೂ ಪ್ರಕರಣಗಳಿಗೆ ಸಂಬಂಧಿಸಿದಂತೆ ಬೆಳಗಾವಿ ಗ್ರಾಮೀಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ತನಿಖೆ ಮುಂದುವರಿದಿದೆ.
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ




