ಗ್ರಾಮಗಳ ಅಭಿವೃದ್ಧಿಯಾದಾಗ ದೇಶದ ಅಭಿವೃದ್ಧಿ, ಗ್ರಾಮೀಣ ರಸ್ತೆ, ಮೂಲಸೌಕರ್ಯಕ್ಕೆ ಮೊದಲ ಆದ್ಯತೆ -ಲಕ್ಷ್ಮಿ ಹೆಬ್ಬಾಳಕರ್
ಪ್ರಗತಿವಾಹಿನಿ ಸುದ್ದಿ, ಬೆಳಗಾವಿ -ಗ್ರಾಮಗಳ ಅಭಿವೃದ್ಧಿಯಾಗದಿದ್ದರೆ ದೇಶ ಅಭಿವೃದ್ಧಿಯಾಗಲು ಸಾಧ್ಯವಿಲ್ಲ. ಹಾಗಾಗಿ ಗ್ರಾಮೀಣ ಪ್ರದೇಶಗಳ ಮೂಲಭೂತ ಸೌಕರ್ಯಕ್ಕೆ ಮೊದಲ ಆದ್ಯತೆ ನೀಡುತ್ತಿರುವುದಾಗಿ ಬೆಳಗಾವಿ ಗ್ರಾಮೀಣ ಕ್ಷೇತ್ರದ ಶಾಸಕಿ ಲಕ್ಷ್ಮಿ ಹೆಬ್ಬಾಳಕರ್ ಹೇಳಿದ್ದಾರೆ.
ಕರ್ನಾಟಕ ನೀರಾವರಿ ನಿಗಮದ ವತಿಯಿಂದ ಸುಮಾರು 2 ಕೋಟಿ ರೂ. ಗಳ ವೆಚ್ಚದಲ್ಲಿ ರಸ್ತೆ ಅಭಿವೃದ್ಧಿ ಕಾಮಗಾರಿಗೆ ಪೂಜೆ ನೆರವೇರಿಸಿ ಅವರು ಮಾತನಾಡುತ್ತಿದ್ದರು. ಕುಕಡೊಳ್ಳಿಯಿಂದ ಎಮ್ ಕೆ ಹುಬ್ಬಳ್ಳಿಯವರೆಗೆ 2.8 ಕಿಮೀ ರಸ್ತೆಯ ಕಾಮಾಗಾರಿಗೆ ಊರಿನ ಹಿರಿಯರ ಹಾಗೂ ಗ್ರಾಮಸ್ಥರ ಸಮ್ಮುಖದಲ್ಲಿ ಅಧಿಕೃತವಾಗಿ ಚಾಲನೆಯನ್ನು ನೀಡಲಾಯಿತು.
ನಾನು ಶಾಸಕಿಯಾದಾಗಿನಿಂದಲೂ ಕ್ಷೇತ್ರದ ರಸ್ತೆ, ಕುಡಿಯುವ ನೀರು, ಶಾಲೆಗಳ ಅಭಿವೃದ್ಧಿ ಸೇರಿದಂತೆ ಜನರ ಅತ್ಯಾವಶ್ಯಕವಾದ ಮೂಲಭೂತ ಸೌಕರ್ಯಗಳ ಅಭಿವೃದ್ಧಿಗೆ ಪ್ರಥಮ ಆದ್ಯತೆ ನೀಡಲಾಗುತ್ತಿದೆ. ಯಾವ ಟೀಕೆಗಳಿಗೂ ನಾನು ಹೆದರುವುದಿಲ್ಲ. ನನ್ನ ಕ್ಷೇತ್ರದ ಜನರಿಗೆ ನನ್ನ ಕೆಲಸ, ನನ್ನ ಪರಿಶ್ರಮ ಗೊತ್ತಿದೆ. ಅವರೆಲ್ಲ ನಿರಂತರವಾಗಿ ನನಗೆ ಶಕ್ತಿ ತುಂಬುತ್ತಿದ್ದಾರೆ ಎಂದು ಅವರು ಹೇಳಿದರು.
ಯಾವ ಯಾವ ಇಲಾಖೆಗಳಿಂದ ಹಣ ತರಲು ಸಾಧ್ಯವೋ ಅವನ್ನೆಲ್ಲ ಕ್ಷೇತ್ರಕ್ಕೆ ತರುತ್ತಿದ್ದೇನೆ. ಅನಿರೀಕ್ಷಿತವಾಗಿ ಬಂದೆರಗಿದ ಪ್ರವಾಹ ನಮ್ಮ ಅಭಿವೃದ್ಧಿ ಕಾಮಗಾರಿಗಳನ್ನು ಒಂದಿಷ್ಟು ಹಿಂದಕ್ಕೆ ತಳ್ಳಿದೆ. ಇದರಿಂದಾಗಿ ಹಿನ್ನಡೆಯಾಗಿದ್ದು ನಿಜ. ಆದರೂ ನಾವು ಧೃತಿಗೆಡಬೇಕಿಲ್ಲ. ಬರುವ ದಿನಗಳಲ್ಲಿ ಇನ್ನಷ್ಟು ಯೋಜನೆಗಳನ್ನು ತರಲು ನಾನು ಬದ್ಧನಾಗಿದ್ದೇನೆ ಎಂದು ಹೆಬ್ಬಾಳಕರ್ ಭರವಸೆ ನೀಡಿದರು.
ಈ ಸಂದರ್ಭದಲ್ಲಿ ಸಿ ಸಿ ಪಾಟೀಲ, ಅಡಿವೇಶ ಇಟಗಿ, ಶ್ರೀಕಾಂತ, ಕುಕಡೊಳ್ಳಿ, ಮಂಜು ಹುಬ್ಬಳ್ಳಿ, ಫಕೀರ್, ಗ್ರಾಮ ಪಂಚಾಯತ್ ಅಧ್ಯಕ್ಷ, ಉಪಾಧ್ಯಕ್ಷರು, ಸದಸ್ಯರು ಹಾಗೂ ಕಾರ್ಯಕರ್ತರು ಉಪಸ್ಥಿತರಿದ್ದರು.
ಪಶುವೈದ್ಯೆ ಅತ್ಯಾಚಾರಿಗಳ ಎನ್ ಕೌಂಟರ್: ಹುಬ್ಬಳ್ಳಿ ಅಧಿಕಾರಿ ನೇತೃತ್ವ
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ