ಪ್ರಗತಿವಾಹಿನಿ ಸುದ್ದಿ; ಬೆಳಗಾವಿ: ಗ್ರಾಮೀಣ ಕ್ರೀಡೆಗಳನ್ನು ಪ್ರೋತ್ಸಾಹಿಸುವ ನಿಟ್ಟಿನಲ್ಲಿ ಶಾಶ್ವತವಾದ ರೀತಿಯಲ್ಲಿ ಮೂಲಭೂತ ಸೌಕರ್ಯಕ್ಕೆ ಒತ್ತು ಕೊಡಲಾಗುವುದು ಎಂದು ಮುಖ್ಯಮಂತ್ರಿಗಳಾದ ಬಸವರಾಜ ಬೊಮ್ಮಾಯಿ ಅವರು ಹೇಳಿದರು.
2022ನೇ ಸಾಲಿನಲ್ಲಿ ಕ್ರೀಡಾ ಲೋಕದಲ್ಲಿ ಭಾರತ ಹಾಗೂ ಕರ್ನಾಟಕದಲ್ಲಿ ಅತ್ಯುತ್ತಮ ಸಾಧನೆಗೈದ ಕ್ರೀಡಾಪಟುಗಳಿಗೆ ಅಭಿನಂದನಾ ನಿರ್ಣಯ ಮಂಡನೇ ಮೇಲೆ ಮಾತನಾಡಿದ ಮುಖ್ಯಮಂತ್ರಿಗಳು, ನಾನು ಮುಖ್ಯಮಂತ್ರಿಯಾದ ಬಳಿಕ ವಿವಿಧ ಕ್ರೀಡಾಕೂಟಗಳ ಬಹುಮಾನದ ಮೊತ್ತವನ್ನು ಏರಿಸಿದ್ದೇನೆ. ಅಷ್ಟೇ ಅಲ್ಲ, ಉತ್ತಮ ಸಾಧನೈಗದ ಕ್ರೀಡಾಪಟುಗಳಿಗೆ ಉದ್ಯೋಗದಲ್ಲಿ ಮೀಸಲು ಸೌಕರ್ಯ ಸಹ ನೀಡಿದ್ದೇವೆ ಎಂದು ತಿಳಿಸಿದರು.
ವಿಧೇಯಕ ಅಂಗೀಕಾರ: ಇಂಗ್ಲೆಂಡ್ ನ ಬರ್ಮಿಂಗ್‌ಹ್ಯಾಮ್‌ನಲ್ಲಿ ನಡೆದ ಕಾಮನ್‌ವೆಲ್ತ್ ಕ್ರೀಡಾ ಕೂಟದಲ್ಲಿ ಭಾರತವು ಅತ್ಯುತ್ತಮ ಸಾಧನೆಯನ್ನು ಮಾಡಿದೆ. ಸಾಧನೆಯ ಫಲವಾಗಿ ಭಾರತವು 4ನೇ ಸ್ಥಾನ ಪಡೆದಿದ್ದು, 61 ಪದಕಗಳನ್ನು ಗಳಿಸಿ ಉತ್ತಮ ಸಾಧನೆ ಮಾಡಿದೆ. ಐಪಿಎಲ್ 2022ರ ಟೂರ್ನಿಯಲ್ಲಿ ಕ್ರಿಕೆಟ್ ಲೋಕವನ್ನೇ ಅಚ್ಚರಿಗೊಳಿಸುವಂತಹ ಸಾಧನೆಯಾಗಿದೆ. 15 ಮಂದಿ ಕನ್ನಡಿಗರು ಪ್ರೋ ಕಬ್ಬಡಿಯ ಲೀಗ್‌ನಲ್ಲಿ ಅತ್ಯುತ್ತಮ ಪ್ರತಿಭೆ ಪ್ರದರ್ಶಿಸಿದ್ದಾರೆ. ಕರ್ನಾಟಕದ ಬಿ.ಸಿ. ಸುರೇಶ್‌ರವರಿಗೆ ಜೀವಮಾನದ ಸಾಧನೆಗಾಗಿ “ಮೇಜರ್ ಧ್ಯಾನ್ ಚಂದ್ ಖೇಲ್ ರತ್ನ ಪ್ರಶಸ್ತಿ” ದೊರಕಿದೆ. 2022 ರ ಸಾಲಿನಲ್ಲಿ ಕಾಮನ್‌ವೆಲ್ತ್, ಐಪಿಎಲ್ 22, ಕಬ್ಬಡಿ ಹಾಗೂ ಇತರ ಕ್ರೀಡಾಕೂಟದಲ್ಲಿ ಭಾಗವಹಿಸಿದ ಎಲ್ಲಾ ಕ್ರೀಡಾಪಟುಗಳಿಗೂ ಅಭಿನಂದನೆಗಳನ್ನು ಸಲ್ಲಿಸುತ್ತಾ, ಮುಂದಿನ ದಿನಗಳಲ್ಲಿ ಇನ್ನೂ ಹೆಚ್ಚು ಕ್ರೀಡಾಪಟುಗಳು ಹೊರ ಹೊಮ್ಮಲಿ ಎಂದು ಆಶಿಸಿ ಕ್ರೀಡೆಯಲ್ಲಿ ಭಾಗವಹಿಸಿದ ಎಲ್ಲಾ ಕ್ರೀಡಾಪಟುಗಳಿಗೆ ಅಭಿನಂದನಾ ನಿರ್ಣಯ ಮಂಡಿಸಲಾಯಿತು. ಸದನವು ಈ ವಿಧೇಯಕವನ್ನು ಅಂಗೀಕರಿಸಿತು.
*ಕರ್ನಾಟಕ ಧನವಿನಿಯೋಗ ವಿಧೇಯಕ-2022ಕ್ಕೆ ವಿಧಾನ ಪರಿಷತ್ತನಲ್ಲೂ ಅಂಗೀಕಾರ*
https://pragati.taskdun.com/karnataka-dhanaviniyoga-bill-2022passvidhana-parishath/
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ