Latest

ಶಾಸಕ ಎಸ್.ಎ.ರಾಮದಾಸ್ ಗೆ ಸಂಕಷ್ಟ; ಕ್ರಿಮಿನಲ್ ಕೇಸ್ ದಾಖಲಿಸಲು ಸೂಚನೆ

ಪ್ರಗತಿವಾಹಿನಿ ಸುದ್ದಿ; ಮೈಸೂರು: ಭೂ ಹಗರಣಕ್ಕೆ ಸಂಬಂಧಿಸಿದಂತೆ ಬಿಜೆಪಿ ಶಾಸಕ ಎಸ್.ಎ.ರಾಮದಾಸ್ ವಿರುದ್ಧ ಕ್ರಿಮಿನಲ್ ಕೇಸ್ ದಾಖಲಿಸುವಂತೆ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ಸೂಚನೆ ನೀಡಿದೆ.

ಮಳಲವಾಡಿ ಭೂ ಹಗರಣ ಸಂಬಂಧ ಸೆಕ್ಷನ್ 420, 460 ಅಡಿ ಕೇಸ್ ದಾಖಲಿಸುವಂತೆ ಕೋರ್ಟ್ ನಿರ್ದೇಶನ ನೀಡಿದೆ. 2008ರಲ್ಲಿ ಲಕ್ಷ್ಮಿಪುರಂ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಭೂಹಗರಣ ಸಂಬಂಧ ರಾಮ್ ದಾಸ್ ವಿರುದ್ಧ ದೂರು ದಾಖಲಾಗಿತ್ತು. ಈ ಪ್ರಕರಣ ಬೆಂಗಳೂರಿನ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯಕ್ಕೆ ವರ್ಗಾವಣೆಗೊಂದಿತ್ತು. ವಿಚಾರಣೆ ನಡೆಸಿದ್ದ ನ್ಯಾಯಾಲಯ 2019ರಲ್ಲಿ ಕ್ರಿಮಿನಲ್ ಕೇಸ್ ದಾಖಲಿಸುವಂತೆ ಸೂಚಿಸಿತ್ತು. ಆದರೆ ರಾಮದಾಸ್ ಕೋರ್ಟ್ ಆದೇಶ ಪ್ರಶ್ನಿಸಿ ತಡೆಯಾಜ್ಞೆ ತಂದಿದ್ದರು.

Home add -Advt

ತಡೆಯಾಜ್ಞೆ ತೆರವುಗೊಂಡಿರುವ ಹಿನ್ನೆಲೆಯಲ್ಲಿ ಮತ್ತೆ ವಿಚಾರಣೆ ಕೈಗೆತ್ತಿಕೊಂಡಿರುವ ನ್ಯಾಯಾಲಯ ಎಸ್.ಎ.ರಾಮದಾಸ್ ವಿರುದ್ಧ ಕ್ರಿಮಿನಲ್ ಕೇಸ್ ದಾಖಲಿಸಲು ಸೂಚನೆ ನೀಡಿದೆ.

ಖಾತೆ ಹಂಚಿಕೆ ಟೆನ್ಶನ್; ಬಿಎಸ್ ವೈ ಭೇಟಿಯಾದ ಸಿಎಂ ಬೊಮ್ಮಾಯಿ

Related Articles

Back to top button