Kannada NewsKarnataka NewsLatest

ಮಾಜಿ ಸಂಸದ ಎಸ್.ಬಿ.ಸಿದ್ನಾಳ ನಿಧನ

ಪ್ರಗತಿವಾಹಿನಿ ಸುದ್ದಿ, ಬೆಳಗಾವಿ – ಹಿರಿಯ ಕಾಂಗ್ರೆಸ್ ನಾಯಕ, ಮಾಜಿ ಸಂಸದ ಎಸ್.ಬಿ.ಸಿದ್ನಾಳ ಮಂಗಳವಾರ ಬೆಳಗಿನಜಾವ ನಿಧನರಾಗಿದ್ದಾರೆ. ಅವರಿಗೆ 85 ವರ್ಷ ವಯಸ್ಸಾಗಿತ್ತು.

ಬೆಳಗಾವಿ ಲೋಕಸಭಾ ಕ್ಷೇತ್ರದಿಂದ 4 ಬಾರಿ ಆಯ್ಕೆಯಾಗಿದ್ದ ಸಿದ್ನಾಳ್, ಮೂಲತಃ ಬೈಲಹೊಂಗಲ ತಾಲೂಕು ಸಾಣಿಕೊಪ್ಪದವರು. ಅವರ ಅಂತ್ಯಕ್ರಿಯೆ ಸಾಣಿಕೊಪ್ಪದಲ್ಲಿ ಇಂದು ಸಂಜೆ 5 ಗಂಟೆಗೆ ನಡೆಯಲಿದೆ.

ಉದ್ಯಮಿಗಳಾದ ಶಶಿಕಾಂತ ಸಿದ್ನಾಳ ಹಾಗೂ ಶಿವಕಾಂತ ಸಿದ್ನಾಳ ಎಸ್.ಬಿ.ಸಿದ್ನಾಳ್ ಅವರ ಪುತ್ರರು.

ಹೆಚ್ಚಿನ ಮಾಹಿತಿಗೆ – 8277539425 ಸಂಪರ್ಕಿಸಬಹುದು.

 

ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ

Related Articles

Back to top button