Kannada NewsKarnataka NewsLatest

*ಮೈಸೂರು ಮಹಾರಾಜಾ ಕಾಲೇಜು ಮೈದಾನದಲ್ಲಿ ಎಸ್.ಜಾನಕಿ ಅಂತಿಮ ದರ್ಶಕ್ಕೆ ವ್ಯವಸ್ಥೆ: ಅಪಾರ ಸಂಖ್ಯೆಯಲ್ಲಿ ಹರಿದು ಬರುತ್ತಿರುವ ಅಭಿಮಾನಿಗಳು*

ಪ್ರಗತಿವಾಹಿನಿ ಸುದ್ದಿ: ಗಾನಕೋಗಿಲೆ ಎಸ್. ಜಾನಕಿ ಅವರು ನಿಧನರಾಗಿದ್ದು, ಮೈಸೂರಿನ ಮಹಾರಾಜಾ ಕಾಲೇಜು ಮೈದಾನದಲ್ಲಿ ಅಂತಿಮ ದರ್ಶನಕ್ಕೆ ವ್ಯವಸ್ಥೆ ಮಾಡಲಾಗಿದೆ. ಅಪಾರ ಸಂಖ್ಯೆಯ ಅಭಿಮಾನಿಗಳು, ಸಂಗೀತ ದಿಗ್ಗಜರು, ಕಲಾವಿದರು, ರಾಜಕೀಯ ಗಣ್ಯರು ಆಗಮಿಸಿ ಅಂತಿಮ ದರ್ಶನ ಪಡೆದು ನಮನ ಸಲ್ಲಿಸುತ್ತಿದ್ದಾರೆ.

ಎಸ್.ಜಾನಕಿ ಅವರಿಗೆ ಮೈಸೂರಿನ ಜೊತೆ ವಿಶೇಷ ನಂಟು ಇತ್ತು. ಅವರನ್ನು ಸ್ಮರಿಸಿ ಅಭಿಮಾನಿಗಳು ಭಾವುಕರಾಗಿದ್ದಾರೆ. ಮೈಸೂರು ಎಂದರೆ ಎಸ್. ಜಾನಕಿ ಅವರಿಗೆ ಪಂಚಪ್ರಾಣ ಆಗಿತ್ತು. ಕೊನೇ ದಿನಗಳನ್ನು ಅವರು ಮೈಸೂರಿನಲ್ಲೇ ಕಳೆದರು. ಅವರ ಆಸೆಯಂತೆ ಮೈಸೂರಿನಲ್ಲೇ ಎಸ್. ಜಾನಕಿ ಅವರ ಅಂತ್ಯಕ್ರಿಯೆ ಮಾಡಲಾಗುತ್ತಿದೆ.

ಮೈಸೂರಿನ ಮಹಾರಾಜ ಮೈದಾನದಲ್ಲಿ ಮಧ್ಯಾಹ್ನ 3 ಗಂಟೆವರೆಗೆ ಅಂತಿಮ ದರ್ಶನಕ್ಕೆ ಅವಕಾಶ ಕಲ್ಪಿಸಲಾಅಗಿದೆ. ಬಳಿಕ ಹೆಚ್.ಡಿ.ಕೋಟೆ ತಾಲೂಕಿನ ಕಣಿಯನ ಹುಂಡಿಯಲ್ಲಿ ಕೇರ್ ಟೇಕರ್ ನವೀನ್ ಅವರ ತೋಟದಲ್ಲಿ ಎಸ್.ಜಾನಕಿ ಅವರ ಅಂತ್ಯಕ್ರಿಯೆ ನೆರವೇರಿಸಲಾಗುತ್ತದೆ. ಸಕಲ ಸರ್ಕಾರಿ ಗೌರವಗಳೊಂದಿಗೆ ಅಂತ್ಯಕ್ರಿಯೆ ನೆರವೇರಿಸಲು ಸರ್ಕಾರ ಸಿದ್ಧತೆ ಮಾಡಿಕೊಂಡಿದೆ.

ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ

Related Articles

Back to top button