Karnataka NewsLatestPolitics

*ಪ್ರಚೋದನಾಕಾರಿ ಭಾಷಣ: ಹಿಂದೂ ಸಂಘಟನೆ ಮುಖಂಡ ಅರೆಸ್ಟ್*

ಪ್ರಗತಿವಾಹಿನಿ ಸುದ್ದಿ: ಪ್ರಚೋದನಾಕಾರಿ ಭಾಷಣ ಹಾಗೂ ಕಲ್ಲು ತೂರಾಟಕ್ಕೆ ಸಂಬಂಧಿಸಿ ಹಿಂದೂ ಸಂಘಟನೆ ಮುಖಂಡ ಸತೀಶ್ ಪೂಜಾರಿಯನ್ನು ದಾವಣಗೆರೆ ಪೊಲೀಸರು ಶಿವಮೊಗ್ಗದ ಸಾಗರದಲ್ಲಿ ಅರೆಸ್ಟ್ ಮಾಡಿದ್ದಾರೆ.

ಹಿಂದೂ ಜಾಗರಣಾ ವೇದಿಕೆ ಮುಖಂಡ ಸತೀಶ್ ದಾವಣಗೆರೆಯಲ್ಲಿ ನಡೆದ ಗಣೇಶ ಮೆರವಣಿಗೆಯಲ್ಲಿ ಪ್ರಚೋದನಾಕಾರಿ ಭಾಷಣ ಮಾಡಿದ್ದರು. ಇದಾದ ಬಳಿಕ ಗಣೇಶ ವಿಸರ್ಜನಾ ಮೆರವಣಿಯಲ್ಲಿ ಕಲ್ಲು ತೂರಾಟ ನಡೆದಿತ್ತು.

Home add -Advt

ಈ ಘಟನೆಗೆ ಅವರ ಭಾಷಣವೇ ಕಾರಣ ಎಂದು ದಾವಣಗೆರೆ ಬಡಾವಣೆ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿತ್ತು. ಈ ಹಿನ್ನೆಲೆ ಸತೀಶ್ ಪೂಜಾರಿಯನ್ನು ಬಂಧಿಸಲಾಗಿದೆ ಎಂದು ಪೊಲೀಸ್ ಅಧಿಕಾರಿ ತಿಳಿಸಿದ್ದಾರೆ.

ನೂರಾನಿ ಆಟೋ ಸ್ಟಾಂಡ್ ಸಮೀಪದ ಅರಳಿ ಮರ ಸರ್ಕಲ್ ಬಳಿ ಗಣೇಶ ಮೆರವಣಿಗೆ ನಡೆಯುತ್ತಿದ್ದ ವೇಳೆ ಮೆರವಣಿಗೆಯಲ್ಲಿ ಸಾಗುತ್ತಿದ್ದವರ ಮೇಲೆಯೇ ಕಲ್ಲು ತೂರಾಟ ನಡೆಸಲಾಗಿತ್ತು. ಮೆರವಣಿಗೆ ಸಂದರ್ಭದಲ್ಲಿ ಕಿಡಿಗೇಡಿಗಳು ಪೊಲೀಸರ ಮೇಲೆಯೇ ಕಲ್ಲು ತೂರಾಟ ನಡೆಸಿದ್ದರು. ಈ ಘಟನೆಯಲ್ಲಿ ಪೊಲೀಸ್ ಸಿಬ್ಬಂದಿ ತಲೆಗೆ ಗಂಭೀರ ಗಾಯವಾಗಿತ್ತು.

ಇನ್ನು ಗಣೇಶ ಮೆರವಣಿಗೆ ಸಾಗುವ ದಾರಿಯೂದ್ದಕ್ಕೂ ಉದ್ವಿಗ್ನ ವಾತಾವರಣ ನಿರ್ಮಾಣವಾಗಿತ್ತು. ಸ್ಥಳದಲ್ಲಿ ಎರಡು ಗುಂಪುಗಳ ಜನರು ಜಮಾಯಿಸಿದ್ದರು. ಪೊಲೀಸ್ ಬಿಗಿ ಬಂದೋಬಸ್ತ್ನಲ್ಲಿ ಗಣೇಶ್ ವಿಸರ್ಜನಾ ಮೆರವಣಿಗೆ ನಡೆದಿತ್ತು.

Related Articles

Back to top button