*ಮಾಜಿ ಸಿಎಂ ಎಸ್.ಎಂ.ಕೃಷ್ಣ ಆಸ್ಪತ್ರೆಗೆ ದಾಖಲು*

ಪ್ರಗತಿವಾಹಿನಿ ಸುದ್ದಿ: ಅನಾರೋಗ್ಯದಿಂದ ಮಾಜಿ ಮುಖ್ಯಮಂತ್ರಿ ಎಸ್.ಎಂ.ಕೃಷ್ಣ ಆಸ್ಪತ್ರೆಗೆ ದಾಖಲಾಗಿದ್ದಾರೆ. ತೀವ್ರ ಅನಾರೋಗ್ಯದಿಂದ ಬಳಲುತ್ತಿದ್ದ ಎಸ್.ಎಂ ಕೃಷ್ಣ ಎರಡು ದಿನಗಳ ಹಿಂದೆ ಬೆಂಗಳೂರಿನ ವಿಜಯ್ ಮಲ್ಯ ರಸ್ತೆಯಲ್ಲಿರುವ ವೈದೇಹಿ ಆಸ್ಪತ್ರೆಗೆ ದಾಖಲಾಗಿದ್ದಾರೆ. ಸದ್ಯ ಅವರ ಆರೋಗ್ಯದಲ್ಲಿ ಚೇತರಿಕೆ ಕಂಡುಬಂದಿದೆ. ಇನ್ನೂ ಎರಡು ದಿನಗಳ ಚಿಕಿತ್ಸೆ ಬಳಿಕ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಲಿದ್ದಾರೆ ಎಂದು ಆಸ್ಪತ್ರೆ ಮೂಲಗಳು ತಿಳಿಸಿವೆ.Home add -Advt *ಜಾನುವಾರುಗಳ ಆಕಸ್ಮಿಕ ಸಾವು: ಸ್ಥಳಕ್ಕೆ ಧಾವಿಸಿದ ಮೃಣಾಲ ಹೆಬ್ಬಾಳಕರ್*