Kannada NewsKarnataka NewsLatest

*ಮಾಜಿ ಸಿಎಂ ಎಸ್.ಎಂ.ಕೃಷ್ಣ ಆರೋಗ್ಯದ ಬಗ್ಗೆ ವೈದ್ಯರ ವಿವರಣೆ*

ಪ್ರಗತಿವಾಹಿನಿ ಸುದ್ದಿ: ಮಾಜಿ ಮುಖ್ಯಮಂತ್ರಿ ಎಸ್.ಎಂ. ಕೃಷ್ಣ ಬೆಂಗಳೂರಿನ ಮಣಿಪಾಲ್ ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಪಡೆಯುತ್ತಿದ್ದು ಅವರ ಆರೋಗ್ಯದ ಬಗ್ಗೆ ವೈದ್ಯರು ಹೆಲ್ತ್ ಬುಲೆಟಿನ್ ಬಿಡುಗಡೆ ಮಾಡಿದ್ದಾರೆ.

Related Articles

ಅನಾರೋಗ್ಯ ಹಿನ್ನೆಲೆಯಲ್ಲಿ ಮಾಜಿ ಸಿಎಂ ಎಸ್.ಎಂ. ಕೃಷ್ಣ ಮಣಿಪಾಲ್ ಆಸ್ಪತ್ರೆಗೆ ದಾಖಲಾಗಿದ್ದು, ಕೆಲ ದಿನಗಳಿಂದ ಚಿಕಿತ್ಸೆ ಪಡೆಯುತ್ತಿದ್ದಾರೆ. ಇಂದು ಬೆಳಿಗ್ಗೆ ಸಿಎಂ ಸಿದ್ದರಾಮಯ್ಯ ಆಸ್ಪತ್ರೆಗೆ ಭೇಟಿ ನೀಡಿ, ಎಸ್.ಎಂ.ಕೃಷ್ಣ ಅವರ ಆರೋಗ್ಯ ವಿಚಾರಿಸಿದರು.

ಎಸ್.ಎಂ.ಕೃಷ್ಣ ಅವರಿಗೆ ಶ್ವಾಸಕೋಶ ತಜ್ಞ ಡಾ. ಸತ್ಯನಾರಾಯಣ ಮೈಸೂರು ಅವರು ಚಿಕಿತ್ಸೆ ನೀಡುತ್ತಿದ್ದು, ಅವರ ವೈದ್ಯಕೀಯ ಚಿಕಿತ್ಸೆ ಮತ್ತು ಮೇಲ್ವಿಚಾರಣೆಯಲ್ಲಿದ್ದಾರೆ.

ಎಸ್.ಎಂ .ಕೃಷ್ಣ ಅವರು ಆಸ್ಪತ್ರೆಗೆ ದಾಖಲಾದ ದಿನಕ್ಕೆ ಹೋಲಿಸಿದರೆ ಈಗ ಅವರ ಆರೋಗ್ಯ ಸ್ಥಿರವಾಗಿದೆ. ಅವರ ಆರೋಗ್ಯ ಸುಧಾರಿಸುತ್ತಿದ್ದು, ಚಿಕಿತ್ಸೆಗೆ ಉತ್ತಮವಾಗಿ ಸ್ಪಂದಿಸುತ್ತಿದ್ದಾರೆ. ಹಾಗಾಗಿ ಆತಂಕಪಡುವ ಅಗತ್ಯವಿಲ್ಲ ಎಂದು ಡಾ.ಸತ್ಯನಾರಾಯಣ ಮೈಸೂರು ತಿಳಿಸಿದ್ದಾರೆ.


ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ

Related Articles

Back to top button