ಪ್ರಗತಿವಾಹಿನಿ ಸುದ್ದಿ: ಮಾಜಿ ಸಿಎಂ ಎಸ್ ಎಂ ಕೃಷ್ಣ ಅವರ ನಿಧನಕ್ಕೆ ಸಂತಾಪ ಸಲ್ಲಿಸಲು ಬೆಂಗಳೂರಿನ ಕೆಪಿಸಿಸಿ ಕಚೇರಿಯಲ್ಲಿ ಇಂದು ಸಂಜೆ 5.30 ಕ್ಕೆ ಶ್ರದ್ಧಾಂಜಲಿ ಸಭೆ ಏರ್ಪಡಿಸಲಾಗಿದೆ.
ಈ ಸಭೆಯಲ್ಲಿ ಪಾಲ್ಗೊಳ್ಳಲು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಬೆಳಗಾವಿಯಿಂದ ಆಗಮಿಸುತ್ತಿದ್ದಾರೆ. ಅದೇ ರೀತಿ ಸಚಿವರು, ಶಾಸಕರು ಕೂಡ ಬೆಳಗಾವಿಯಿಂದ ಆಗಮಿಸುತ್ತಿದ್ದು, ಈ ಶ್ರದ್ಧಾಂಜಲಿ ಸಭೆಯಲ್ಲಿ ಭಾಗವಹಿಸಲಿದ್ದಾರೆ ಎಂದು ಕೆಪಿಸಿಸಿ ಅಧ್ಯಕ್ಷರೂ ಆಗಿರುವ ಡಿಸಿಎಂ ಡಿ ಕೆ ಶಿವಕುಮಾರ್ ಅವರು ಮಾಧ್ಯಮ ಹೇಳಿಕೆಯಲ್ಲಿ ತಿಳಿಸಿದ್ದಾರೆ.
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ