LatestUncategorized

*ಮಾಜಿ ಸಿಎಂ ಎಸ್.ಎಂ.ಕೃಷ್ಣಗೆ ಪದ್ಮವಿಭೂಷಣ ಗೌರವ; ಅಭಿನಂದನೆ ಸಲ್ಲಿಸಿದ ಸಿಎಂ ಬೊಮ್ಮಾಯಿ*

ಪ್ರಗತಿವಾಹಿನಿ ಸುದ್ದಿ; ಬೆಂಗಳೂರು: ಮಾಜಿ ಮುಖ್ಯಮಂತ್ರಿ ಎಸ್.ಎಂ ಕೃಷ್ಣ ಅವರಿಗೆ ಪದ್ಮವಿಭೂಷಣ ಗೌರವ ಹಿನ್ನೆಲೆಯಲ್ಲಿ ಸಿಎಂ ಬಸವರಾಜ್ ಬೊಮ್ಮಾಯಿ ಎಸ್.ಎಂ.ಕೃಷ್ಣ ಅವರನ್ನು ಭೇಟಿಯಾಗಿ ಅಭಿನಂದನೆ ಸಲ್ಲಿಸಿದರು.

Home add -Advt

ಬೆಂಗಳೂರಿನ ಸದಾಶಿವನಗರದ ಎಸ್.ಎಂ.ಕೃಷ್ಣ ಅವರ ಮನೆಗೆ ಭೇಟಿ ನೀಡಿದ ಸಿಎಂ ಬೊಮ್ಮಾಯಿ, ಮಾಜಿ ಮುಖ್ಯಮಂತ್ರಿಗಳಿಗೆ ಅಭಿನಂದನೆ ಸಲ್ಲಿಸಿದರು. ಈ ವೇಳೆ ಮಾತನಾಡಿದ ಸಿಎಂ ಬೊಮ್ಮಾಯಿ, ಎಸ್.ಎಂ.ಕೃಷ್ಣ ಅವರಿಗೆ ಪದ್ಮವಿಭೂಷಣ ಗೌರವ ಸಿಕ್ಕಿರುವುದು ಖುಷಿಯಾಗಿದೆ. ಅವರು ಸಿಎಂ ಆಗಿದ್ದಾಗ ಹಲವು ಯೋಜನೆ ಜಾರಿ ಮಾಡಿದ್ದರು. ಎಸ್.ಎಂ ಕೃಷ್ಣ ಸಾರ್ವಜನಿಕ ಬದುಕು ನಮಗೆಲ್ಲರಿಗೂ ಮಾದರಿ ಎಂದು ಹೇಳಿದರು.

ಸಿಎಂ ಬೊಮ್ಮಾಯಿ ಅವರಿಗೆ ಸಚಿವರಾದ ಆರ್.ಅಶೋಕ್, ಡಾ.ಸುಧಾಕರ್ ಮತ್ತಿತರರು ಸಾಥ್ ನೀಡಿದರು.

*ಉದ್ಯೋಗ ಕೊಡಿಸುವುದಾಗಿ ವಂಚನೆ; ನಿರ್ಮಾಪಕ ಪ್ರಕಾಶ್ ಬಂಧನ*

https://pragati.taskdun.com/produserprakasharrestedcheating-case/

Related Articles

Back to top button